ಬೆಂಗಳೂರು, ನವೆಂಬರ್ 05 (ಕರ್ನಾಟಕ ವಾರ್ತೆ):
ತೋಟಗಾರಿಕೆ ಮತ್ತು ಕೃಷಿ ಬೆಳೆಗಳಿಗೆ ನಿರ್ವಹಣೆ ಮುಖ್ಯ. ಇತ್ತೀಚೆಗೆ ಬೆಳೆಗಳಲ್ಲಿ ತ್ಯಾಜ್ಯ ಹೆಚ್ಚಾಗಿದ್ದು ಅದರ ನಿರ್ವಹಣೆಯ ಬಗ್ಗೆ ಸರಿಯಾಗಿ ಚರ್ಚಿಸಿ ರೈತರಿಗೆ ತಿಳಿಸಬೇಕು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ವಿಷ್ಣುವರ್ಧನ ಹೇಳಿದರು.
ಬಾಗಲಕೋಟ, ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯದ ಆವರಣದಲ್ಲಿ ಮೂರು ದಿನಗಳವರೆಗೆ ಕೃಷಿ ವಿಶ್ವವಿದ್ಯಾಲಯ ಧಾರವಾಡ ಸಮೇತಿ (ಉತ್ತರ) ವಿಸ್ತರಣಾ ನಿರ್ದೇಶನಾಲಯ ಹಾಗೂ ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಬಾಗಲಕೋಟೆ ಇವರ ಸಹಯೋಗದೊಂದಿಗೆ ಕೃμÉೂೀನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿ ತೋಟಗಾರಿಕೆ ಬೆಳೆಗಳಲ್ಲಿ ಕೊಯ್ಲೋತ್ತರ ತಂತ್ರಜ್ಞಾನ ಕುರಿತು ಉತ್ತರ ಕರ್ನಾಟಕದ 14 ಜಿಲ್ಲೆಗಳ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಗೂ ಅತ್ಮ ಸಿಬ್ಬಂದಿಗಳಿಗೆ ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸೆಕೆಂಡರಿ ಅಗ್ರಿಕಲ್ಚರಲ್‍ಗೆ ಹೆಚ್ಚಿನ ಆದ್ಯತೆ ನೀಡಿ ಸಬ್ಸಿಡಿ ಮತ್ತು ಅನುದಾನ ಕೊಡುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಶೀತಗೃಹ ಮತ್ತು ಸಂಸ್ಕರಣಾ ಘಟಕಗಳನ್ನು ಉಪಯೋಗಿಸಿಕೊಂಡು ಬೆಳೆಗಳನ್ನು ಸರಿಯಾದ ರೀತಿಯಲ್ಲಿ ಕಾಪಾಡಿಕೊಳ್ಳುವುದರ ಜೊತೆಗೆ ಉತ್ಪನ್ನಗಳಲ್ಲಿ ಬರುವ ತ್ಯಾಜ್ಯ ಕಡಿಮೆ ಮಾಡಲು ಸೂಚಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ತೋಟಗಾರಿಕಾ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರಾದ ಡಾ. ವೆಂಕಟೇಶಲು ಮಾತನಾಡುತ್ತಾ, ನಮ್ಮ ಜ್ಞಾನ ಮತ್ತು ತಂತ್ರಜ್ಞಾನಗಳ ಮೂಲಕ ರೈತರಿಗೆ ಮಾಹಿತಿಯನ್ನು ತಲುಪಿಸುವ ಕೆಲಸವಾಗಬೇಕು. ಬೆಳೆಯು ಕಚ್ಚಾ ವಸ್ತುವಿನಿಂದ ಹಿಡಿದು ಗ್ರಾಹಕರು ಸೇರುವವರೆಗೂ ಅದರ ಸಂಸ್ಕರಣೆ ಉತ್ತಮವಾದರೆ ಒಳ್ಳೆಯ ರೀತಿಯ ಸ್ಪಂದನೆ ದೊರೆಯುತ್ತದೆ. ಬೆಳೆಗಳ ಗುಣಮಟ್ಟ ಕಾಪಾಡುವುದರಿಂದ ವಿತರಣೆಯ ಪ್ರಮಾಣ ಹೆಚ್ಚಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಡಾ.ದೀಪಾ ತೇರದಾಳ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ.ರುದ್ರೇಶ ಡಿ ಎಲ್. ಗಣ್ಯರನ್ನು ಸ್ವಾಗತಿಸಿದರು. ಕೃಷಿ ವಿಶ್ವವಿದ್ಯಾಲಯ ಧಾರವಾಡದ ಪ್ರಾಧ್ಯಾಪಕರು ಹಾಗೂ ಸಮಿತಿ ಸಂಯೋಜಕರಾದ ಎಸ್.ಎನ್ ಜಾಧವ ಪ್ರಾಸ್ತಾವಿಕ ಮಾತನಾಡಿದರು. ಉಪ ನಿರ್ದೇಶಕರಾದ ಡಾ.ಗೀತಾ ಲೋಳಸೂರಮಠ ಕಾರ್ಯಕ್ರಮವನ್ನು ವಂದಿಸಿದರು.