ಹೊಸ ಹೊಸ ಸಂಶೋಧನೆಗಳ ಅವಿಷ್ಕಾರದಲ್ಲಿ ತೊಡಗಿಸಿಕೊಳ್ಳಿ ಕೃಷಿ ಸಂಶೋಧಕರಿಗೆ ಹಾಗೂ ಕೃಷಿಕರಿಗೆ ಸಚಿವ ಚಲುವರಾಯಸ್ವಾಮಿ ಕರೆ ಸರ್ಕಾರವು ಕೃಷಿ ವಿಶ್ವವಿದ್ಯಾಲಯಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಬದ್ಧ

varthajala
0

 ಬೆಂಗಳೂರು, ನವೆಂಬರ್ 13, (ಕರ್ನಾಟಕ ವಾರ್ತೆ) : ಸರ್ಕಾರವು ಕೃಷಿ ವಿಶ್ವವಿದ್ಯಾಲಯಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿದೆ. ಕೃಷಿ ಸಂಶೋಧಕರು ಮತ್ತು ಕೃಷಿಕರು ಹೊಸ ಹೊಸ ಸಂಶೋಧನೆಗಳ ಅವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕರೆ ನೀಡಿದರು.


ಇಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಜಿ.ಕೆ.ವಿ.ಕೆ ಯಲ್ಲಿ ಹಮ್ಮಿಕೊಳ್ಳಲಾದ “ಕೃಷಿ ಮೇಳ - 2025” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಈ ಹಿಂದೆ 4 ಕೃಷಿ ವಿಶ್ವವಿದ್ಯಾನಿಲಯಗಳು ಇದ್ದವು. ಕಳೆದ ಸಾಲಿನಿಂದ 5 ನೇ ಕೃಷಿ ವಿಶ್ವವಿದ್ಯಾನಿಲಯ ಆರಂಭವಾಗಿದ್ದು, ಎಲ್ಲಾ 5 ವಿಶ್ವ ವಿದ್ಯಾನಿಲಯಗಳಿಂದಲೂ ಕೃಷಿ ಮೇಳವನ್ನು ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರತಿ ಕೃಷಿ ವಿಶ್ವವಿದ್ಯಾಲಯಗಳು ಹೊಸ ಹೊಸ ತಳಿಗಳನ್ನು ರೈತರಿಗೆ ಪರಿಚಯಿಸುತ್ತಿದೆ. ಇದರೊಂದಿಗೆ ಹೊಸ ಹೊಸ ತಂತ್ರಜ್ಞಾನ ಆವಿμÁ್ಕರಗಳನ್ನು ಮಾಡತೊಡಗಿವೆ. ಇದು ಹೆಮ್ಮೆಯ ವಿಷಯವಾಗಿದೆ. ಹಿಂದೆ ಮಳೆಯನ್ನೇ ನಂಬಿಕೊಂಡು ಬೆಳೆಗಳನ್ನು ಬಿತ್ತನೆ ಮಾಡಲಾಗುತ್ತಿತ್ತು. ಆದರೆ ಇಂದು ಹೊಸ ಅವಿμÁ್ಕರಗಳಿಂದಾಗಿ ವಿವಿಧ ತಾಂತ್ರಿಕತೆಯ ಬಳಕೆಯಿಂದ ಎಲ್ಲಾ ಕಾಲದಲ್ಲೂ ಸಹ ರೈತರು ಬಿತ್ತನೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಹೆಚ್ಚಿನ ಇಳುವರಿಯೊಂದಿಗೆ ಆದಾಯವನ್ನು ಸಹ ಗಳಿಸುತ್ತಿದ್ದಾರೆ. ಇದಕ್ಕೆಲ್ಲಾ ಕಾರಣ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ವಿಜ್ಞಾನಿಗಳು ಅಧಿಕಾರಿಗಳು ಅಧುನಿಕ ತಂತ್ರಜ್ಞಾನಕ್ಕೆ ತಕ್ಕಂತೆ ಅವಿμÁ್ಕರ ಮಾಡಿರುವ ಹೊಸ ತಳಿಗಳು ಎಂದು ತಿಳಿಸಿದರು.

ಇಡೀ ವಿಶ್ವದಲ್ಲಿಯೇ ನಮ್ಮ ದೇಶ ಆರ್ಥಿಕವಾಗಿ ಮುಂದುವರೆದಿದೆ ಎಂದರೆ ಅದಕ್ಕೆ ಪ್ರಮುಖ ಕಾರಣ ಮೂಲತಃ ರೈತರ ಶ್ರಮ ಮತ್ತು ಅವರ ಬದ್ದತೆ ಎಂದರೆ ತಪ್ಪಾಗಲಾರದು. ಅನ್ನದಾತ ದೇಶದ ಬೆನ್ನೆಲು ಎಂಬುದರಲ್ಲಿ ಎರಡು ಮಾತಿಲ್ಲ. ರೈತ ಬೆಳೆ ಬೆಳೆದು ಜನತೆಯ ಹಸಿವನ್ನು ನೀಗಿಸುತ್ತಿದ್ದಾನೆ. ಹೊಸ ಹೊಸ ಅಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಉತ್ತಮ ಬೆಳೆಗಳನ್ನು ತೆಗೆಯುತ್ತಿದ್ದಾನೆ. ಈ ಹಿಂದೆ ನಾವು ಆಹಾರ ಪದಾರ್ಥಗಳನ್ನು ಬೇರೆ ದೇಶಗಳಿಮದ ಆಮದು ಮಾಡಿಕೊಳ್ಳುತ್ತಿದ್ದೆವು. ಆದರೆ ನಾವು ಈಗ ಆಹಾರ ಪದಾರ್ಥಗಳನ್ನಲ್ಲದೇ, ಹಣ್ಣು, ತರಕಾರಿ, ಹೋಗಳನ್ನು ಬೇರೆ ದೇಶಗಳಿಗೆ ರಫ್ತು ಮಾಡುವಷ್ಟು ಮುಂದುವರೆದಿದ್ದೇವೆ ಎಂದರೆ ನಮ್ಮ ವಿಜ್ಞಾನಿಗಳ ಹೊಸ ಹೊಸ ಸಂಶೋಧನೆಗಳೇ ಕಾರಣ ಎಂದರು.

ರಾಷ್ಟ್ರದಲ್ಲಿ ಇರುವ 75 ಕೃಷಿ ವಿಶ್ವವಿದ್ಯಾಲಯಗಳ ಪೈಕಿ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯವು 11ನೇ ಸ್ಥಾನದಲ್ಲಿ ಇದ್ದು ರಾಜ್ಯದಲ್ಲಿ ಮೊದಲನೇ ಸ್ಥಾನದಲ್ಲಿ ಇದೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಪ್ರತಿ ವರ್ಷ ಹೊಸ ತಳಿಗಳನ್ನು ಉದ್ಘಾಟನೆ ಮಾಡುತ್ತಿದೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಕಳೆದ 2 ವರ್ಷಗಳಲ್ಲಿ ಅನೇಕ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೊಸ ಹೊಸ ತಳಿಗಳನ್ನು ಬಿಡುಗಡೆ ಮಾಡಿದೆ. ಇಂದು ಸಹ 5 ಹೊಸ ತಳಿಗಳಾದ ಸೂರ್ಯಾಕಾಂತಿ - ಕೆ.ಬಿಎಸ್ 88, ಜೋಳ - ಸಿಎನ್‍ಬಿಎನ್, ಹರಳಿನ ತಳಿ, ನೀಲಿಗೆಡ್ಡೆ (ಕಪ್ಪು ಹರಿಶಿಣ) ಹಾಗೂ ಹರಿಶಿಣ ತಳಿಗಳನ್ನು ಇಂದು ಬಿಡುಗಡೆ ಮಾಡಲಾಗಿದೆ. ಇವೆಲ್ಲವೂ ಸಹ ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ಕೊಡುವಂತಹ ತಳಿಗಳಾಗಿವೆ ಎಂದು ತಿಳಿಸಿದರು.

ಇಂದು ಐ.ಟಿ. ಬಿ.ಟಿ ಕಂಪನಿಗಳಲ್ಲಿ ಕೆಲಸ ಮಾಡುವವರು ಸಹ ಕೃಷಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಯುವಕರು ಸಹ ಕೃಷಿಯಲ್ಲಿ ತೊಡಗಿಕೊಳ್ಳುವಂತೆ ಅಗತ್ಯ ಮಾರ್ಗದರ್ಶನ ನೀಡಬೇಕು. ಈ ವರ್ಷ 5000 ಉದ್ಯಮಿಗಳಿಗೆ  ಕೆಪೆಕ್ ನಿಂದ 15 ಲಕ್ಷ ರೂಗಳ ಸಹಾಯಧನವನ್ನು ನೀಡಲಾಗುತ್ತಿದ್ದು ರಾಜ್ಯ ಸರ್ಕಾರದಿಂದ 9 ಲಕ್ಷ ರೂ ಹಾಗೂ ಕೇಂದ್ರ ಸರ್ಕಾರದಿಂದ ಉಳಿದ 6 ಲಕ್ಷ  ರೂ ನೀಡಲಾಗುತ್ತಿದೆ.

ದೊಡ್ಡ ಮಟ್ಟದ ಕಟಾವು ಯಂತ್ರೋಪಕರಣಗಳ ಖರೀದಿಗಾಗಿ ಸಾಮಾನ್ಯ ವರ್ಗ ಕೃಷಿಕರಿಗೆ 40 ಲಕ್ಷ ರೂ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಕೃಷಿಕರಿಗೆ  50 ಲಕ್ಷ ರೂ ವರೆಗೆ ಸಹಾಯಧನ ನೀಡಲಾಗುತ್ತಿದೆ.  ಅದೇ ರೀತಿ ಕೃಷಿ ಹೊಂಡಗಳ ನಿರ್ಮಾಣಕ್ಕೂ ಸಹ ಗರಿಷ್ಠ ಮಟ್ಟದ ಸಹಾಯಧನ ನೀಡಲಾಗುತ್ತಿದೆ.

ಇತ್ತೀಚಿಗೆ ಫಿಲಿಪೈನ್ಸ್ ದೇಶಕ್ಕೆ ಪ್ರವಾಸ ಕೈಗೊಂಡು ಮನಿಲಾದಲ್ಲಿರುವ ಅಂತರಾಷ್ಟ್ರೀಯ ಭತ್ತ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿದ್ದೆ. ಈ ವೇಳೆ ಫಿಲಿಪೈನ್ಸ್ ದೇಶದಲ್ಲಿ ಸುಮಾರು 25 ರಿಂದ 30 ದಿನಗಳ ಕಾಲ ಮಳೆ ನಿರಂತರವಾಗಿ ಬಂದರೂ ಹಾನಿಯಾಗದಂತಹ ಭತ್ತದ ತಳಿಯನ್ನು ಕಂಡು ಹಿಡಿದಿದ್ದು, ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿಯಲ್ಲೂ ನಮ್ಮ ವಿಜ್ಞಾನಿಗಳು ರೈತರಿಗೆ ಇಂತಹ ತಳಿ ಸಂಶೋಧಿಸಿದ್ದಾರೆ ಎಂದು ತಿಳಿಸಿದರು.

ಬೆಂಗಳೂರಿನ ಜಿ.ಕೆ.ವಿ.ಕೆ ಕೃಷಿ ವಿಶ್ವವಿದ್ಯಾಲಯವು ಯಶಸ್ವಿಯಾಗಿ ಉತ್ತಮವಾದ ಕೆಲಸವನ್ನು ನಿರ್ವಹಿಸುತ್ತಾ ಹೊಸ ಹೊಸ ಸಂಶೋಧನೆಗಳಲ್ಲಿ ತೊಡಗಿಸಿಕೊಂಡಿದೆ. ಅಲ್ಲದೇ ಕಾಲಕಾಲಕ್ಕೆ ವಿವಿಧ ಕಾರ್ಯಕ್ರಮಗಳ ಆಯೋಜನೆ ಹಾಗೂ ವಿವಿಧ ಮಾಧ್ಯಮಗಳ ಮೂಲಕ ರೈತರಿಗೆ ಅಗತ್ಯ ಮಾರ್ಗದರ್ಶನ ನೀಡುವ ಕಾರ್ಯವನ್ನು ನಿರ್ವಹಿಸುತ್ತಿದೆ.

ಕಳೆದ ಬಾರಿಗೆ ಹೋಲಿಸಿದಲ್ಲಿ ಈ ಬಾರಿ ಹೆಚ್ಚಿನ ಮಳೆಯಿಂದಾಗಿ ಸುಮಾರು 14 ಲಕ್ಷ ಹೆಕ್ಟೇರ್ ಪ್ರದೇಶವು ಹಾನಿಯಾಗಿದ್ದು, ರೈತರು ತುಂಬಾ ಸಂಕಷ್ಡ ಅನುಭವಿಸಿದರು. ಅದರಲ್ಲಿ ಉತ್ತರ ಕರ್ನಾಟದ ಜಿಲ್ಲೆಗಳು ಬಹಳ  ಮಳೆ ಹಾನಿಗೆ ಒಳಗಾಗಿದ್ದು, ಈ  ಪ್ರದೇಶಗಳಿಗೆ ಸನ್ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಕಂದಾಯ ಸಚಿವರು, ನಾನು ಸಹ ಭೇಟಿ ನೀಡಿ ಪರಶೀಲಿಸಿ, ಮಳೆ ಹಾನಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಎನ್‍ಡಿಆರ್.ಎಫ್ ನಿಂದ ರೂ 8500/- ಹಾಗೂ ರಾಜ್ಯ ಸರ್ಕಾರದಿಂದ ರೂ 8500/- ರಂತೆ ಪ್ರತಿ ಹೆಕ್ಟೇರ್ ಪ್ರದೇಶಕ್ಕೆ ಪರಿಹಾರ ಧನವನ್ನು ಡಿ.ಬಿ.ಟಿ. ಮೂಲಕ ನೇರವಾಗಿ ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ.

Post a Comment

0Comments

Post a Comment (0)