ಬೆಂಗಳೂರು :*ಕನ್ನಡ ರಾಜ್ಯೋತ್ಸವ ದಿನಾಚರಣೆಯ* ಅಂಗವಾಗಿ ಮತ್ತಿಕೆರೆಯ ಶ್ರೀ ಚೌಡೇಶ್ವರಿ ಬಸ್ ನಿಲ್ದಾಣದ ಆವರಣದಲ್ಲಿ ಸಮಾಜ ಸೇವಕರು ಹಾಗೂ ಉದ್ಯಮಿಗಳಾದ ಎಸ್. ರಮೇಶ್ ರವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಿವೃತ್ತ ಸೈನ್ಯಾಧಿಕಾರಿ ಸುಂದರಮೂರ್ತಿರವರುಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಮಾಜ ಸೇವಕರು ಹಾಗೂ ಉದ್ಯಮಿಗಳಾದ ಡಾ. ಜಿ. ಎಸ್. ಚೌಧರಿ, ರೋಟರಿ ಸಂಸ್ಥೆಯ ನರಸಿಂಹರಾಜು, ನಟೇಶ್, ಪಿ. ಪ್ರಕಾಶ್, ವೆಂಕಟೇಶ್, ಪ್ರವೀಣ್, ಮಹದೇವ್ ಎಲೆಕ್ಟ್ರಿಕಲ್ಸ್ ನ ಭೇರುನಾಥ್, ಮಗಾರಾಮ್ ಮುಂತಾದ ಗಣ್ಯರ ಉಪಸ್ಥಿತಿಯಲ್ಲಿ ಕನ್ನಡ ಧ್ವಜಾರೋಹಣವನ್ನು ಮಾಡಿ, ನಾಡದೇವಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ನೆರವೇರಿಸಿದರು.
ನಂತರ ಸಮಾಜ ಸೇವಕರಾದ ಎಸ್. ರಮೇಶ್ ಅವರು ಮಾತನಾಡುತ್ತಾ, ಕಳೆದ ಹಲವಾರು ವರ್ಷಗಳಿಂದ ಇಲ್ಲಿ ತಾವು ಕನ್ನಡ ರಾಜ್ಯೋತ್ಸವದ ಆಚರಣೆಯನ್ನು ಆಯೋಜಿಸುತ್ತಾ ಬರುತ್ತಿದ್ದು, ಈ ದಿನವನ್ನು ನಾವೆಲ್ಲರೂ ಒಟ್ಟಾಗಿ ಸೇರಿ ಹಬ್ಬದಂತೆ ಆಚರಣೆ ಮಾಡಬೇಕೆಂಬುದು ತಮ್ಮ ಅಶಯವಾಗಿದ್ದು, ಎಲ್ಲರ ಸಹಕಾರ ಹಾಗೂ ಸಕ್ರಿಯ ಪಾಲ್ಗೊಳ್ಳುವಿಕೆಯಿಂದಾಗಿ ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವುದಕ್ಕೆ ತಮ್ಮ ಸಂತಸವನ್ನು ವ್ಯಕ್ತಪಡಿಸಿ, ಭವಿಷ್ಯದಲ್ಲೂ ಈ ಸಂಭ್ರಮಾಚರಣೆ ಹೀಗೆ ಮುಂದುವರೆಯ ಬೇಕೆಂಬ ತಮ್ಮ ಆಶಯವನ್ನು ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಸಹಯೋಗದಲ್ಲಿ ಸಾರ್ವಜನಿಕರಿಗಾಗಿ ಉಚಿತ ಆರೋಗ್ಯ ತಪಾಸಣಾ ಹಾಗೂ ರಕ್ತ ದಾನ ಶಿಬಿರವು ಯಶಸ್ವಿಯಾಗಿ ಸಂಪನ್ನವಾಯಿತು. ರಾಜ್ಯೋತ್ಸವದ ಸಡಗರದ ಈ ಸಂದರ್ಭದಲ್ಲಿ ಅನ್ನ ಪ್ರಸಾದ ವ್ಯವಸ್ಥೆಯನ್ನು ಸಹ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

