ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳ ಆಯ್ಕೆ

varthajala
0

 ರಾಜ್ಯ ಒಕ್ಕಲಿಗರ ಸಂಘದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಧ್ಯಕ್ಷರು ಸೇರಿದಂತೆ ಪದಾಧಿಕಾರಿಗಳ ಆಯ್ಕೆ ಅವಿರೋಧವಾಗಿ ನವೆಂಬರ್ 23 ರಂದು ಜರುಗಿತು.


ಸಂಘದ ಎಲ್ಲಾ 35 ಮಂದಿ ಕಾರ್ಯಕಾರಿ ಸಮಿತಿಯ ಸದಸ್ಯರು ಸರ್ವಾನುಮತದಿಂದ ಪದಾಧಿಕಾರಿಗಳನ್ನು ಆಯ್ಕೆ ಮಾಡಿರುವುದು ಹೊಸ ದಾಖಲೆಯಾಗಿ ಹೊಸ ಸಂಪ್ರದಾಯ ಸೃಷ್ಟಿ ಆಗಿದೆ.
ಈ ಬಾರಿಯ ಪದಾಧಿಕಾರಿಗಳ ಚುನಾವಣೆಯಲ್ಲಿ ಈ ಹಿಂದೆ ನಡೆಯುತ್ತಿದ್ದಂತೆ ಯಾವುದೇ ಬಣಗಳು, ಗುಂಪುಗಳು, ತಂಡಗಳು ಇರಲಿಲ್ಲ. ಸ್ಪರ್ಧೆಯೂ ಏರ್ಪಡದಿರುವುದು ವಿಶೇಷವಾಗಿದೆ. ಇದು ಸಂಘದ ಇತಿಹಾಸದಲ್ಲಿ ದಾಖಲೆಯಾಗಿ ಉಳಿಯಲಿದೆ.
ಸಂಘರ್ಷದಿಂದ ದೂರ ಸರಿದು‌ ಸಂಘದ ಎಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರು ಒಮ್ಮತದ ನಿಲುವು ತೆಗೆದುಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇದರ ಬಗ್ಗೆ ಸಮುದಾಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದು ಸಂಘದ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಜನಾಂಗದ ಹಿತ ಕಾಪಾಡಲು ಸಹಕಾರಿ ಆಗುತ್ತದೆ ಎಂದು ಬಣ್ಣಿಸಲಾಗುತ್ತಿದೆ.

ನಮ್ಮ ಒಕ್ಕಲಿಗ ಸಮುದಾಯದ ನಾಯಕರಾದ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಶ್ರೀ ಡಿ.ಕೆ‌.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಮಾಡಲೇಬೇಕು.
 ಕಾಂಗ್ರೆಸ್ ಪಕ್ಷದ ಅಧಿನಾಯಕಿ ಶ್ರೀಮತಿ ಸೋನಿಯಾ ಗಾಂಧಿ ಅವರು, ಲೋಕಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು, ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಶ್ರೀ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಲು ಒಮ್ಮೆ ಅವಕಾಶ ಮಾಡಿಕೊಡಬೇಕು.

ನಮ್ಮ ಜನಾಂಗದ ನಾಯಕರಿಗೆ ಅನ್ಯಾಯವಾಲು ಬಿಡುವುದಿಲ್ಲ. ಅನ್ಯಾಯವಾದರೆ ಕೈಕಟ್ಟಿ ಕೂರುವುದೂ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷಕ್ಕೆ ದುಡಿದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಶಿವಕುಮಾರ್ ಅವರ ಶ್ರಮವೂ ಸಾಕಷ್ಟಿದೆ. ಒಕ್ಕಲಿಗರ ಪ್ರಾಬಲ್ಯ ಇರುವ ಹಳೇ ಮೈಸೂರು ಭಾಗದಲ್ಲಿ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನಗಳು ದೊರೆತಿವೆ.
ಎಲ್ಲಾ ರೀತಿಯಲ್ಲೂ ನ್ಯಾಯೋಚಿತವಾಗಿ ಮೊದಲ ಅವಧಿಯಲ್ಲೇ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕಾಗಿತ್ತು.
ಆದರೂ ನಮ್ಮ ಜನಾಂಗವು ಎರಡನೇ ಅವಧಿಯಲ್ಲಿ ಅವಕಾಶ ಸಿಗಬಹುದು ಎಂಬ ತಾಳ್ಮೆಯಿಂದ ಇತ್ತು. ಈಗ ಮಾಧ್ಯಮಗಳಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರದಲ್ಲಿ ಹಲವು ವಿಚಾರಗಳು ಪ್ರಸ್ತಾಪವಾಗುತ್ತಿದ್ದು, ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ.
ನಾವು ಇನ್ನೊಬ್ಬರ ಅವಕಾಶ ಕೇಳುತ್ತಿಲ್ಲ. ಆದರೆ ನಮ್ಮ ಜನಾಂಗಕ್ಕೆ ನ್ಯಾಯ ಸಿಗಬೇಕು. ಅನ್ಯಾಯವಾದರೆ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.
ಹೀಗಾಗಿ ಕಾಂಗ್ರೆಸ್ ಪಕ್ಷ ಎಲ್ಲಾ ಶಾಸಕರು ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಹಕರಿಸಬೇಕು ಎಂದು ವಿನಂತಿ ಮಾಡುತ್ತೇವೆ.

Post a Comment

0Comments

Post a Comment (0)