ಪ್ರೌಢಶಾಲಾ ಹಾಗೂ ಪದವಿ ವಿದ್ಯಾರ್ಥಿಗಳಿಗೆ ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಚಿತ್ರಕಲೆ ಸ್ಪರ್ಧೆಗಳ ಆಯೋಜನೆ

varthajala
0

 ಬೆಂಗಳೂರು, ನವೆಂಬರ್ 19 (ಕರ್ನಾಟಕ ವಾರ್ತೆ): ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ವಿಜ್ಞಾನದಲ್ಲಿ ಆಸಕ್ತಿ ಮೂಡಿಸಲು “ಸುಸ್ಥಿತ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ (Science and Technology for Sustainable Development) ಎಂಬ ವಿಷಯದ ಮೇಲೆ ವಿಜ್ಞಾನ ಮತ್ತು ವಸ್ತು ಪ್ರದರ್ಶನ ಹಾಗೂ ಚಿತ್ರಕಲೆ ಸ್ಪರ್ಧೆಗಳನ್ನು 2025ನೇ ನವೆಂಬರ್ 26ರಂದು ಅಕಾಡೆಮಿಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.


ಸ್ಪರ್ಧೆಗಳಲ್ಲಿ ರಾಜ್ಯದ ಎಲ್ಲಾ ಪ್ರೌಢಶಾಲಾ ಹಾಗೂ ವಿಜ್ಞಾನ ಪದವಿ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದ್ದು, ಆಸಕ್ತ ವಿದ್ಯಾರ್ಥಿಗಳು 2025ನೇ ನವೆಂಬರ್ 25ರ ಒಳಗಾಗಿ ಗೂಗಲ್ ಫಾರಂ https://forms.gle/js3x5LAf94ihh7956 ಮೂಲಕ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮದ ಸಂಯೋಜಕರಾದ ಶ್ರೀನಿವಾಸು ವಿ.ಕೆ. ವೈಜ್ಞಾನಿಕಾಧಿಕಾರಿ, ಮೊಬೈಲ್ ಸಂ. 9620767819 ಹಾಗೂ ಉಮೇಶ ಘಾಟಗೆ, ವೈಜ್ಞಾನಿಕಾಧಿಕಾರಿ, ಮೊಬೈಲ್ ಸಂ. 9743084194 ಇವರನ್ನು  ಅಥವಾ ಅಕಾಡೆಮಿಯ ಜಾಲತಾಣ https://kstacademy.in ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಆನಂದ್ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)