ಬೆಂಗಳೂರು, ನವೆಂಬರ್ 11 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರು/ಭಕ್ತಾಧಿಗಳ ಅನುಕೂಲಕ್ಕಾಗಿ ನವೆಂಬರ್ 28 ರಿಂದ ಹೊಸದಾಗಿ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ವಯಾ ಮೈಸೂರು, ಕ್ಯಾಲಿಕಟ್, ಗುರುವಾಯೂರು, ತ್ರಿಶೂರು, ಅಂಗಾಮಲೈ, ಕೊಟ್ಟಾಯಂ, ಏರುಮಲೈ ಮಾರ್ಗದಲ್ಲಿ ವೋಲ್ವೋ ಬಸ್ ನಿಗದಿತ ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುವುದು.
ಬೆಂಗಳೂರು-ನೀಲಕ್ಕಲ್ ಗೆ (ಪಂಪಾ-ಶಬರಿಮಲೈ) ವಯಸ್ಕರಿಗೆ ಪ್ರಯಾಣ ದರ ರೂ.1950/- ನಿಗದಿ ಪಡಿಸಲಾಗಿದೆ. ಬೆಂಗಳೂರಿನ ಶಾಂತಿ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50 ಗಂಟೆಗೆ ಬಸ್ ಹೊರಟು, ನೀಲಕ್ಕಲ್ (ಪಂಪಾ-ಶಬರಿಮಲೈ)ಗೆ ಬೆಳಿಗ್ಗೆ 6.45 ಗಂಟೆಗೆ ತಲುಪಲಿದೆ. ನೀಲಕ್ಕಲ್ (ಪಂಪಾ-ಶಬರಿಮಲೈ)ನಿಂದ ಸಂಜೆ 6.00 ಗಂಟೆಗೆ ಬಸ್ ಹೊರಟು ಬೆಂಗಳೂರಿಗೆ ಬೆಳಿಗ್ಗೆ 10.00 ಗಂಟೆಗೆ ತಲುಪಲಿದೆ ಎಂದು ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.