ಸಚಿವಾಲಯದ ಅಧಿಕಾರಿ ಸಿಬ್ಬಂದಿಗಳಿಗೆ ಐಕ್ಯತಾ ಪ್ರಮಾಣ ವಚನ ಬೋಧಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

varthajala
0

 ಬೆಂಗಳೂರು, ನವೆಂಬರ್ 18, (ಕರ್ನಾಟಕ ವಾರ್ತೆ): ಭಾರತ ದೇಶದ ಮೊದಲ ಮಹಿಳಾ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಜನ್ಮ ದಿನದ ಅಂಗವಾಗಿ ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಪ್ರಮಾಣ ವಚನ ಬೋಧಿಸಿದರು.


ಈ ಸಂದರ್ಭಗಳಲ್ಲಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೆÇನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಬಿ.ಬಿ.ಕಾವೇರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಡಾ. ಕೆ.ಜಿ ಜಗದೀಶ ಸೇರಿದಂತೆ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.

Post a Comment

0Comments

Post a Comment (0)