ಬೆಂಗಳೂರು, ನವೆಂಬರ್ 10 (ಕರ್ನಾಟಕ ವಾರ್ತೆ): ಬೆಂಗಳೂರಿನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿನ ಕ್ರೀಡಾ ವಿದ್ಯಾರ್ಥಿನಿಲಯದ ಸಾಮಗ್ರಿಗಳು, ಗ್ರಂಥಾಲಯದ ಪುಸ್ತಕಗಳು ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ಸ್, ಸಿವಿಲ್ ಅನುಪಯುಕ್ತ ಉಪಕರಣಗಳು ಮತ್ತು ವಸ್ತುಗಳನ್ನು ಯಾವ ಸ್ಥಿತಿಯಲ್ಲಿವೇ ಅದೇ ಸ್ಥಿತಿಯಲ್ಲಿ ದಿನಾಂಕ: 09-10-2025ರಂದು ಬೆಳಿಗ್ಗೆ 11.00 ಗಂಟೆಗೆ ಸಂಸ್ಥೆಯ ಆವರಣದಲ್ಲಿ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ನಿರ್ಧರಿಸಲಾಗಿತ್ತು. ಆದರೆ ಸಂಸ್ಥೆಯ ಎಲ್ಲಾ ಅಧಿಕಾರಿ/ಸಿಬ್ಬಂದಿ ವರ್ಗದವರನ್ನು ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಿಬ್ಬಂದಿಗಳನ್ನು ನೇಮಕ ಮಾಡಿದ್ದರಿಂದ ಹರಾಜು ಪ್ರಕ್ರಿಯೆ ಕಾರ್ಯವನ್ನು ನವೆಂಬರ್ 26 ಕ್ಕೆ ಮುಂದೂಡಲಾಗಿದೆ.
ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಇಚ್ಛೆಯುಳ್ಳವರು ನವೆಂಬರ್ 25 ಬೆಳಿಗ್ಗೆ 10.30 ರಿಂದ ನವೆಂಬರ್ 26 ಬೆಳಿಗ್ಗೆ 10.30 ರೊಳಗೆ ರೂ.12,500/- ಗಳ ಮುಂಗಡ ಠೇವಣಿ ಹಣವನ್ನು ಸಂಸ್ಥೆಯ ನಗದು ವಿಭಾಗದಲ್ಲಿ ಪಾವತಿಸಿ ಹರಾಜಿನಲ್ಲಿ ಭಾಗವಹಿಸುವುದು ಹಾಗೂ ನಿಯಮಾನುಸಾರ ಹರಾಜು ಪ್ರಕ್ರಿಯೆ ಮುಗಿದ ನಂತರ ಬಿಡ್ ಸಿಗದೆ ಇದ್ದಂತಹ ಬಿಡ್ದಾರರಿಗೆ ಅವರು ಪಾವತಿಸಿರುವ ಮುಂಗಡ ಹಣ ಠೇವಣಿ ಹಣವನ್ನು ಹಿಂತಿರುಗಿಸಲಾಗುವುದು ಎಂದು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.