ಬೆಂಗಳೂರು, ನವೆಂಬರ್ 10 (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ವು ಆಯೋಜಿಸಲಾಗಿರುವ 50 ದಿನಗಳ ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ತರಬೇತಿ ಶಿಬಿರದಲ್ಲಿ ನವೆಂಬರ್ 11 ರಂದು ಬೆಳಿಗ್ಗೆ 11:00 ಗಂಟೆಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಐದು ರಾಷ್ಟ್ರೀಯ ಬ್ಯಾಂಕ್‍ಗಳಿಗೆ ಆಯ್ಕೆಯಾಗಿ, ಕೇಂದ್ರ ಸರ್ಕಾರದ ಅಬಕಾರಿ ನಿರೀಕ್ಷಕರಾಗಿ, ಪ್ರಸ್ತುತ ಪುರಾತತ್ವ, ವಸ್ತುಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆಯ ಆಯುಕ್ತರಾಗಿರುವ ಹಿರಿಯ ಶ್ರೇಣಿ ಕೆ.ಎ.ಎಸ್ ಅಧಿಕಾರಿ ಎ. ದೇವರಾಜು ಮತ್ತು ಎಸ್‍ಬಿಐ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಕಲ್ಯಾಣ್‍ಕುಮಾರ್ ಭಾಗವಹಿಸುವರು.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸುವರು. ಕುಲಸಚಿವ ಪ್ರೊ. ಎಸ್.ಕೆ ನವೀನ್ ಕುಮಾರ್ ಉಪಸ್ಥಿತರಿರುವರು ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.