ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ರೈತರು ಮತ್ತು ಬೆಂಗಳೂರು ನಗರ ಗ್ರಾಹಕರ ನಡುವಿನ ನೇರ ಸಂಪರ್ಕಕ್ಕೆ ವೇದಿಕೆಯಾಗಿ "ಕೃಷಿ ಸಂತೆಯನ್ನು ಪ್ರತಿ ತಿಂಗಳ ನಾಲ್ಕನೇ ಶನಿವಾರದಂದು ಆಯೋಜಿಸುತ್ತಾ ಬಂದಿದೆ.ಸತತವಾಗಿ ಎಂಟು ಯಶಸ್ವೀ ಸಂತೆಗಳ ನಂತರ, ಈಗ 9ನೇ ಕೃಷಿ ಸಂತೆ ಕಾರ್ಯವನ್ನು 2025 ನೇ ಡಿಸೆಂಬರ್ 27 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ವಿಶೇಷವಾಗಿ ಆಯೋಜಿಸಲಾಗಿದೆ.ಇದೇ ಸಂದರ್ಭದಲ್ಲಿ "ರೈತ ದಿನಾಚರಣೆ" (ಏisಚಿಟಿ ಆiತಿಚಿs) ಕಾರ್ಯಕ್ರಮವನ್ನು ಸಹ ಡಾ: ಬಾಬು ರಾಜೇಂದ್ರಪ್ರಸಾದ್ ಅಂತರಾಷ್ಟ್ರೀಯ ಸಮಾವೇಶ ಭವನ, ಜಿ.ಕೆ.ವಿ.ಕೆ.ಯಲ್ಲಿ ಆಯೋಜಿಸಲಾಗಿದೆ.ಅಂದು ಬೆಳಗ್ಗೆ 10-30 ಗಂಟೆಗೆ ಕೃಷಿ ವಿಶ್ವವಿದ್ಯಾನಿಲಯದ ಆವರಣದಲ್ಲಿ (ಗಣಪತಿ ದೇವಸ್ಥಾನ ಹತ್ತಿರ) ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ಸನ್ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಕೃಷಿ ಸಚಿವರು ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿಗಳಾದ ಎನ್. ಚಲುವರಾಯಸ್ವಾಮಿ, ಸನ್ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್, ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.ಕಂದಾಯ ಸಚಿವರು ಹಾಗೂ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೃಷ್ಣ ಬೈರೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಲಿದ್ದಾರೆ.ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಗಳು ಡಾ: ಎಸ್.ವಿ.ಸುರೇಶ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕೃಷಿ ವಿಶ್ವವಿದ್ಯಾನಿಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಶರತ್ ಬಚ್ಚೇಗೌಡ, ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.
ಪ್ರಚಲಿತ ಕೃಷಿ ವಿಷಯಗಳ ಕುರಿತು ತಜ್ಞರು ಹಾಗೂ ಪ್ರಗತಿಪರ ರೈತರೊಂದಿಗೆ ಚರ್ಚೆ-ಸಂವಾದ ಕಾರ್ಯಕ್ರಮ ನಡೆಯಲಿದೆ. ಇದೇ ಸಮಯದಲ್ಲಿ ರಾಜ್ಯದ ಏಳು ಜಿಲ್ಲೆಗಳ ಪ್ರಗತಿಪರ ರೈತರನ್ನು ಗುರುತಿಸಿ ಸನ್ಮಾನ ಮಾಡಲಾಗುತ್ತದೆ. ಅಲ್ಲದೆ ಕೃಷಿ ಕ್ಷೇತ್ರದ ಹೊಸ ಸಂಶೋಧನೆಗಳು, ತಾಂತ್ರಿಕ ಪ್ರಗತಿಗಳು ಮತ್ತು ರೈತ ಸ್ನೇಹಿ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.
ರೈತರು ಹಾಗೂ ಸಾರ್ವಜನಿಕರು ಈ ರೈತ ಸಂತೆ ಹಾಗೂ ರೈರಮತ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.
ವಿಶೇಷ ಸೂಚನೆ "ರೈತ ಸಂತೆ ಮತ್ತು ರೈತ ದಿನಾಚರಣೆಗೆ" ಮಾಧ್ಯಮದ ಪ್ರತಿನಿಧಿಗಳನ್ನು ಕರೆದೊಯ್ಯಲು ಕಬ್ಬನ್ ಪಾರ್ಕ್‍ನಲ್ಲಿರುವ ಪ್ರೆಸ್‍ಕ್ಲಬ್ ಆವರಣದಿಂದ ವಾಹನ ವ್ಯವಸ್ಥೆ ಮಾಡಲಾಗಿದೆ. ಪ್ರೆಸ್‍ಕ್ಲಬ್‍ನಿಂದ ವಾಹನವು ಅಂದು ಬೆಳಗ್ಗೆ 8-30 ಗಂಟೆಗೆ ಹೊರಡಲಿದೆ.
ಹೆಚ್ಚಿನ ಮಾಹಿತಿಗಾಗಿ: ವೆಂಕಟೇಶ ಗಾಂಧಿ, ಮೊ.ಸಂ. 9481425522, ಡಾ. ಪ್ರಹ್ಲಾದ ಪಿ ಭಟ್ ಸಹಾಯಕ ಪ್ರಾಧ್ಯಾಪಕರು ಮೊ.ಸಂ. 80955 58663, ವಸಂತ್ ಆರ್, ಮೊ. ಸಂ. 85532 42422 ರವರನ್ನು ಸಂಪರ್ಕಿಸುವಂತೆ ಕೃಷಿ ವಿಶ್ವವಿದ್ಯಾಲಯದ ಹಿರಿಯ ವಾರ್ತಾತಜ್ಞರು ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.