ಬೆಂಗಳೂರು: ನವೆಂಬರ್-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 40414 ವಾಹನಗಳನ್ನು ತನಿಖೆಗೊಳಪಡಿಸಿ 3961 ಪ್ರಕರಣಗಳನ್ನು ಪತ್ತೆಹಚ್ಚಿ, 3974 ಟಿಕೆಟ್ ರಹಿತ ಪ್ರಯಾಣಿಕರಿಂದ 7,61,334/-ರೂಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದೆ.
ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 99,143/- ರೂಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದೆಯಲ್ಲದೆ, ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ.
ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ಕೋರಿದ್ದಾರೆ.