ಬೆಳಗಾವಿ / ಬೆಂಗಳೂರು: ರಾಜ್ಯದಲ್ಲಿರುವ ವನ್ಯ ಜೀವಿಧಾಮಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳಲ್ಲಿ ಗಣತಿಯಂತೆ ಒಟ್ಟು 6395 ಆನೆಗಳು ಮತ್ತು 563 ಹುಲಿಗಳಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ತಿಳಿಸಿದರು.ವಿಧಾನ ಪರಿಷತ್ ನಲ್ಲಿಂದು ವಿಧಾನ ಪರಿಷತ್ ಸದಸ್ಯರಾದ ಡಾ. ತಿಮ್ಮಯ್ಯ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ವನ್ಯ ಜೀವಿಗಳು ಅರಣ್ಯ ಪ್ರದೇಶದಿಂದ ಹೊರ ಬರುವುದನ್ನು ತಡೆಗಟ್ಟಲು ಮಾನವ ಪ್ರಾಣಹಾನಿಗೆ ಕಾರಣವಾದ ಹುಲಿ ಹಾಗೂ ಆನೆಯನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರೆಹಿಡಿಯಲಾಗಿರುತ್ತದೆ ಎಂದರು.
ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಳ್ಳಬೇಟೆ ಶಿಬಿರಗಳ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ಸಂಘರ್ಷ ಸಂಭವಿಸುತ್ತಿರುವ ಅರಣ್ಯದಂಚಿನ ಗಡಿರೇಖೆಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮಕೈಗೊಳ್ಳಲಾಗಿರುತ್ತದೆ. ಶಿಬಿರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಂಘರ್ಷವಿರುವ ವಲಯಗಳಲ್ಲಿ ನಿರಂತರವಾಗಿ ಮುಂದಿನ ಮೂರು ತಿಂಗಳವರೆಗೆ ಗಸ್ತು ನಡೆಸಿ, ಮಾನವ ವನ್ಯಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಕ್ರಮವಹಿಸಲಾಗಿದೆ.
ಮಾನವ-ವನ್ಯಜೀವಿ ಸಂಘರ್ಷ ಸಮಸ್ಯೆ ಇರುವ ಪ್ರತಿಯೊಂದು ವನ್ಯಜೀವಿ' ವಲಯಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಉಂಟಾಗುವ ಸಂದರ್ಭದಲ್ಲಿ ತಕ್ಷಣದ ಪ್ರತಿಕ್ರಿಯೆಗಾಗಿ ಕ್ಷಿಪ್ರ ಸ್ಪಂದನ ವಾಹನ ಹಾಗೂ ಡ್ರೋನ್ ಒಳಗೊಂಡಂತೆ ಇತರೆ ಉಪಕರಣಗಳೊಂದಿಗೆ ಒಂದು ಕ್ಷಿಪ್ರಸ್ಪಂದನ ತಂಡವನ್ನು (RRT team) ಪಾಳಿ ಆಧಾರದ ಮೇಲೆ ರಚಿಸಿ, ಸದರಿ ಕ್ಷಿಪ್ರಸ್ಪಂದನ ತಂಡಕ್ಕೆ ಪ್ರಸ್ತುತ ಸಿಬ್ಬಂದಿಗಳನ್ನು ಅಸ್ತಿತ್ವದಲ್ಲಿರುವ ಆನೆ ಕಾರ್ಯಪಡೆ / ಕ್ಷಿಪ ಸ್ಪಂದನ ತಂಡ / ವಿಶೇಷ ಹುಲಿ ಸಂರಕ್ಷಣಾ ದಳದಿಂದ (STPF) ನಿಯೋಜಿಸಲಾಗಿದೆ.
ಮಾನವ ವನ್ಯಜೀವಿ ಸಂಘರ್ಷವಿರುವ ವನ್ಯಜೀವಿ ವಲಯಗಳ ಸಂಪೂರ್ಣ ಗಡಿರೇಖೆಗಳಲ್ಲಿ ಎಲ್ಲೆಲ್ಲಿ ನೆಟ್ ವರ್ಕ್‍ನ ಸಂಪರ್ಕವಿರುವುದು ಅಲ್ಲಿ Real time Surveillance GSM Camera with Garuda Software ನ್ನು ಅಳವಡಿಸಿ, ಸದರಿ ಮಾಹಿತಿಯನ್ನಾಧರಿಸಿ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣದ ನಿರ್ವಹಣೆಯನ್ನು ಮಾಡಲಾಗುತ್ತಿದೆ.
ಜೊತೆಗೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಲಭ್ಯವಿರುವ Camera traps ಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಅರಣ್ಯ ಪ್ರದೇಶದ ಅಂಚಿನಲ್ಲಿರುವ Conflict Zone ನಲ್ಲಿ ಅಳವಡಿಸಿ ಪ್ರಾಣಿಗಳ ಚಲನವಲನಗಳನ್ನು ಪರಿಶೀಲಿಸಲಾಗುತ್ತಿದೆ.
ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆ ತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು, ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ನಿಯಂತ್ರಿಸಲು ರೈಲ್ವೆ ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ಇದುವರೆಗೂ ಒಟ್ಟು 428 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ.
ಆನೆ ಕಾರ್ಯಪಡೆ ಮತ್ತು ಚಿರತೆ ಕಾರ್ಯಪಡೆಗಳನ್ನು ರಚಿಸಿದ್ದು, ವನ್ಯ ಪ್ರಾಣಿಗಳಿಗಾಗಿ ಅರಣ್ಯ ಪ್ರದೇಶದ ಒಳಗೆ ಜಲ ಸಂಪನ್ಮೂಲಗಳು ಮತ್ತು ಆವಾಸ ಸ್ಥಾನ ಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ತಂತ್ರಜ್ಞಾನ ಗಳ ಬಳಕೆಯ ಮೂಲಕ ತ್ವರಿತ ಕಾರ್ಯಚರಣೆ ಕೈಗೊಳ್ಳಲಾಗುತ್ತಿದ್ದು, ಸಂಘರ್ಷ ತಡೆಗಟ್ಟಲು 5 ವರ್ಷ ಗಳ ಸ್ಟ್ರಾಟೆಜಿಕ್ ಪ್ಲಾನ್ ತಯಾರಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ತಿಳಿಸಿದ್ದಾರೆ.