ಬೆಂಗಳೂರಿನ ವಯ್ಯಾಲಿಕಾವಲಿನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ(ಟಿಟಿಡಿ)ದಲ್ಲಿ ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಏರ್ಪಡಿಸಿದ್ದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮದಲ್ಲಿ ವಿದುಷಿ ಶ್ರೀಮತಿ ರಮ್ಯಾ ಸುಧೀರ್ ಅವರು ಅನ್ನಮಾಚಾರ್ಯರ ಕೀರ್ತನೆಗಳನ್ನು ಹಾಗೂ ಹರಿದಾಸರ ಪದಗಳನ್ನು ಪ್ರಸ್ತುತ ಪಡಿಸಿದರು.
ಇವರ ಗಾಯನಕ್ಕೆ ಕೀ-ಬೋರ್ಡ್ ವಾದನದಲ್ಲಿ ವಿದ್ವಾನ್ ಶ್ರೀ ಟಿ.ಎಸ್. ರಮೇಶ್ ಮತ್ತು ತಬಲಾ ವಾದನದಲ್ಲಿ ಶ್ರೀ ಜಗದೀಶ್ ಸಾಥ್ ನೀಡಿದರು. ಕಾರ್ಯಕ್ರಮದ ಸಂಚಾಲಕರಾದ ಡಾ|| ಪಿ. ಭುಜಂಗರಾವ್ ವಂದನಾರ್ಪಣೆ ಮಾಡಿದರು.
