ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

varthajala
0

 ಬೆಂಗಳೂರು: ಬೆಂಗಳೂರಿನ ಕೆ.ಆರ್ ವೃತ್ತದಲ್ಲಿರುವ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಬಿ.ಟೆಕ್ ಮತ್ತು ಎಂ.ಟೆಕ್ ವಿದ್ಯಾರ್ಥಿಗಳಿಗೆ ಬೋಧಿಸಲು ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ವಿಶ್ವವಿದ್ಯಾಲಯದ ಜಾಲತಾಣ www.uvce.karnataka.gov.in ನಿಂದ ಡೌನ್ಲೋಡ್ ಮಾಡಿಕೊಂಡು ಸಂಬಂಧಿತ ದಾಖಲೆಗಳ ಪ್ರತಿಗಳೊಂದಿಗೆ ಕುಲಸಚಿವರು, ಯುವಿಸಿಇ, ಕೆ.ಆರ್ ವೃತ್ತ, ಬೆಂಗಳೂರು- 560 001 ರವರಿಗೆ ಡಿಸೆಂಬರ್ 29 ರೊಳಗೆ ಸಲ್ಲಿಸುವುದು. ನಿಗಧಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಕುಲಸಚಿವರು / ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರ ಕಛೇರಿಯನ್ನು ಸಂಪರ್ಕಿಸಬಹುದು. ಕೊನೆಯ ದಿನಾಂಕದ ನಂತರ ಸ್ವೀಕರಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ವಿಶ್ವವಿದ್ಯಾಲಯವು ಯಾವುದೇ ಅತಿಥಿ ಅಧ್ಯಾಪಕರನ್ನು ನೇಮಿಸಿಕೊಳ್ಳದಿರುವ ಹಕ್ಕನ್ನು ಕಾಯ್ದಿರಿಸಿದೆ. ಸಂದರ್ಶನದ ದಿನಾಂಕವನ್ನು ವೆಬ್ ಸೈಟ್ ನಲ್ಲಿ ತಿಳಿಸಲಾಗುತ್ತದೆ ಅಥವಾ ಅರ್ಹ ಅಭ್ಯರ್ಥಿಗಳಿಗೆ ನೇರವಾಗಿ ತಿಳಿಸಲಾಗುತ್ತದೆ ಎಂದು ಪ್ರಭಾರ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)