ಬೆಂಗಳೂರು:-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26 ನೇ ಸಾಲಿಗೆ ಪರಿಶಿಷ್ಟ ಜಾತಿ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ 03 ಅಭ್ಯರ್ಥಿಯನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಗೆ ಮಾಹೆಯಾನ ರೂ 15,000ಗಳ ಸ್ಟೈಪೆಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾμÁ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಾಸ್ ಪೆÇೀರ್ಟ್ ಅಳತೆಯ ಎರಡು ಭಾವಚಿತ್ರ, ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಡಿಸೆಂಬರ್ 15 ರೊಳಗಾಗಿ ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, 2ನೇ ಮಹಡಿ, ನಂ.17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560001, ಇಲ್ಲಿಗೆ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ವಿಶೇಷ ಘಟಕ ಯೋಜನೆಯಡಿ” ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು.