ಬೆಂಗಳೂರು: ಡಿಸೆಂಬರ್ 29 ರಂದು ಕುವೆಂಪು ಜನ್ಮದಿನಾಚರಣೆಯ ಅಂಗವಾಗಿ ಪ್ರಾಧಿಕಾರದ ಕಚೇರಿಯ ಆವರಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಮಾರಂಭದಲ್ಲಿ ಖ್ಯಾತ ಸಾಹಿತಿಗಳು ಮತ್ತು ನಾಟಕಕಾರರಾದ ಡಾ.ಕೆ.ವೈ.ನಾರಾಯಣಸ್ವಾಮಿ ಅವರು ಭಾಗವಹಿಸಿ ‘ಕುವೆಂಪು ನಾಟಕ ಲೋಕ' ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕುವೆಂಪು ಭಾμÁ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಚನ್ನಪ್ಪ ಕಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಧಿಕಾರದ ಸದಸ್ಯರಾದ ಡಾ.ಡಿ.ಕೆ.ಚಿತ್ತಯ್ಯ ಪೂಜಾರ್ ಹಾಗೂ ಪ್ರಾಧಿಕಾರದ ಸದಸ್ಯರುಗಳು, ಪ್ರಾಧಿಕಾರದ ರಿಜಿಸ್ಟ್ರಾರ್ ದತ್ತಪ್ಪ ಸಾಗನೂರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.