ಇ-ಖಾತಾ ಯೋಜನೆಗೆ ಮುಖ್ಯಮಂತ್ರಿ ಹಾಗೂ ಸಚಿವರಿಂದ ಚಾಲನೆ ಪೌರ ಕಾರ್ಮಿಕರಿಗೆ ಆದೇಶ ಪತ್ರಗಳ ವಿತರಣೆ - ಮನೆಯಲ್ಲೇ ಕುಳಿತು ಇ-ಖಾತಾ ಪಡೆದುಕೊಳ್ಳಿ

varthajala
0

 ಬೆಳಗಾವಿ / ಬೆಂಗಳೂರು: ಪೌರಾಡಳಿತ ಇಲಾಖೆ ನೂತನವಾಗಿ ಜಾರಿಗೆ ತಂದಿರುವ ಇ-ಖಾತಾ ಯೋಜನೆಗೆ ಸುವರ್ಣಸೌಧದಲ್ಲಿ 2025 ನೇ ಡಿಸೆಂಬರ್ 18 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಸಚಿವರುಗಳು ಚಾಲನೆ ನೀಡಿದರು.ನಗರಾಭಿವೃದ್ಧಿ ಪೌರಾಡಳಿತ ನಿರ್ದೇಶನಾಲಯ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯಿಂದ ಜರುಗಿದ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ಮತ್ತು ಮನೆಯ ಹಕ್ಕುಪತ್ರಗಳನ್ನು ಸಾಂಕೇತಿಕವಾಗಿ ವಿತರಿಸಿ, ಇ-ಖಾತಾ ಕೈಪಿಡಿ ಬಿಡುಗಡೆಗೊಳಿಸಲಾಯಿತು.

ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಮಾತನಾಡಿ, ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್‍ಗಳು ಸೇರಿ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿರುವ 6 ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ಮನೆ ನಿರ್ಮಿಸಲಾಗುತ್ತಿದೆ. ಗೃಹಭಾಗ್ಯ ಯೋಜನೆಯಡಿ 6119 ಫಲಾನುಭವಿ ಗುರುತಿಸಲಾಗಿದೆ. ಸರ್ಕಾರ 326 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈವರೆಗೆ 4159 ಮನೆ ನಿರ್ಮಾಣ ಪೂರ್ಣಗೊಂಡಿದೆ. ಬೆಳಗಾವಿಯಲ್ಲಿ 172, ವಿಜಯಪುರದಲ್ಲಿ 133 ಮನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.
ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಎಂ.ಬಿ.ಪಾಟೀಲ, ರಹೀಂಖಾನ್ ಮಾತನಾಡಿದರು. ಡಾ.ಎಂ.ಸಿ.ಸುಧಾಕರ, ಶಾಸಕ ಆಸೀಫ್ ಸೇರ್, ಪಾಲಿಕೆ ಮಹಾಪೌರ ಮಂಗೇಶ ಪವಾರ, ಉಪಮೇಯರ್ ವಾಣಿ ಜೋತಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುμÁರ ಗಿರಿನಾಥ, ಕಾರ್ಯದರ್ಶಿ ದೀಪಾ ಚೋಳನ್, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಪ್ರಭುಲಿಂಗ ಕವಳಿಕಟ್ಟಿ, ಮಿಷನ್ ಡೈರೆಕ್ಟರ್ ಡಾ.ಸೆಲ್ವಮಣಿ ಆರ್. ಇತರರಿದ್ದರು.

Post a Comment

0Comments

Post a Comment (0)