ಬೆಳಗಾವಿ / ಬೆಂಗಳೂರು, ಸುಮಾರು ನಾಲ್ಕು ಸಾವಿರಕ್ಕಿಂತ ಹೆಚ್ಚಿನ ಮರಗಳನ್ನು ಬೆಳೆಸುವ ಮೂಲಕ ಸಾಲು ಮರದ ತಿಮ್ಮಕ್ಕ ಎಂದೇ ಸುಪ್ರಸಿದ್ದರಾಗಿ ಪದ್ಮಶ್ರೀ ಹಾಗೂ ನಾಡೋಜ ಪ್ರಶಸ್ತಿ ಪುರಸ್ಕøತರಾದ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಪರಿಷತ್‍ನಲ್ಲಿ ಇಂದು ಸಂತಾಪ ಸಲ್ಲಿಸಲಾಯಿತು.
1911ರ ಜೂನ್ 30ರಂದು ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ಜನಿಸಿದ್ದ ಶ್ರೀಯುತರು 2025 ನೇ ನವೆಂಬರ್ 14 ರಂದು ನಿಧನರಾದರು.
ಶ್ರೀಯುತರು ತಾವು ತಾಯಿಯಾಗುವ ಭಾಗ್ಯವಿಲ್ಲವೆಂದು ತಿಳಿದ ಮೇಲೆ ಕುದೂರು-ಹುಲಿಕಲ್ ರಸ್ತೆ ಬದಿಯಲ್ಲಿ ಆಲದ ಮರಗಳ ಸಸಿಗಳನ್ನು ನೆಟ್ಟು ಅವುಗಳನ್ನು ಮಕ್ಕಳಂತೆ ಸಾಕಿ ಪೋಷಣೆ ಮಾಡಿ ಬೆಳೆಸಿದ್ದರು. ಶ್ರೀಯುತರ ಸ್ಪೂರ್ತಿಯಲ್ಲಿ "ತಿಮ್ಮಕ್ಕ ಮಾತು 284 ಮಕ್ಕಳು" ಎಂಬ ಸಾಕ್ಷ್ಯಚಿತ್ರವನ್ನು ನಿರ್ಮಿಸಲಾಗಿತ್ತು. ಈ ಸಾಕ್ಷ್ಯಚಿತ್ರವು 2000 ಇಸವಿಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು.
ಔಪಚಾರಿಕ ಶಿಕ್ಷಣವನ್ನು ಪಡೆಯದಿದ್ದ ಶ್ರೀಯುತರು ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಪರಿಸರ ಸಂರಕ್ಷಣೆಗೆ ನೀಡಿರುವ ಕೊಡುಗೆಯನ್ನು ಗುರುತಿಸಿ ಭಾರತದ ರಾಷ್ಟ್ರೀಯ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕರ್ನಾಟಕದ ಕೇಂದ್ರೀಯ ವಿಶ್ವವಿದ್ಯಾಲಯವು 2020ರಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಘೋಷಿಸಿದೆ. ಇಂದಿರಾ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ಕಲ್ಪವಲ್ಲಿ ಪ್ರಶಸ್ತಿ, ಮಹಿಳಾ ರತ್ನ ಪ್ರಶಸ್ತಿ ಹಾಗೂ ರಾಜ್ಯೋತ್ಸವ ಪ್ರಶಸ್ತಿಗಳಲ್ಲದೆ ಇತರೆ ಹತ್ತು ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿರುತ್ತಾರೆ.
2016ರಲ್ಲಿ ಬ್ರಿಟಿμï ಬ್ರಾಡ್ ಕಾಸ್ಟಿಂಗ್ ಕಾರ್ಪೊರೇಷನ್ ಸಂಸ್ಥೆಯವರು ವಿಶ್ವದ ಅತ್ಯಂತ ಪ್ರಭಾವಶಾಲಿ ಮತ್ತು ಸ್ಫೂರ್ತಿದಾಯಕ ಮಹಿಳೆಯರಲ್ಲಿ ಒಬ್ಬರೆಂದು ಶ್ರೀಯುತರನ್ನು ಸೇರ್ಪಡೆ ಮಾಡಿ, ಭಾರತದಲ್ಲಿ ಅನೇಕ ಅರಣೀಕರಣ ಕಾರ್ಯಕ್ರಮಗಳಿಗೆ ಆಹ್ವಾನಿಸಲಾಗಿತ್ತು. ಶ್ರೀಯುತರ ಗ್ರಾಮದಲ್ಲಿ ನಡೆಯುವ ವಾರ್ಷಿಕ ಜಾತ್ರೆಗಾಗಿ ಮಳೆನೀರನ್ನು ಸಂಗ್ರಹಿಸಲು ಟ್ಯಾಂಕ್ ನಿರ್ಮಿಸುವಂತಹ ಇತರೆ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಶ್ರೀಯುತರ ನಿಧನದಿಂದ ರಾಜ್ಯವು ಹಿರಿಯ ಪರಿಸರ ಸಂರಕ್ಷಕಿಯೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಂತಾಪ ಸೂಚನೆ ನಿರ್ಣಯ ಮಂಡಿಸಿದರು. ಮೃತರ ಗೌರವಾರ್ಥ ಸದಸ್ಯರು ಎದ್ದು ನಿಂತು ಒಂದು ನಿಮಿಷ ಮೌನ ಆಚರಿಸಿದರು.
.jpeg)