ತಿಂಗಳ ಉಪನ್ಯಾಸ ಕಾರ್ಯಕ್ರಮ

varthajala
0

 ಬೆಂಗಳೂರು: ಡಿಸೆಂಬರ್ 29 ರಂದು ಕುವೆಂಪು ಜನ್ಮದಿನಾಚರಣೆಯ ಅಂಗವಾಗಿ ಪ್ರಾಧಿಕಾರದ ಕಚೇರಿಯ ಆವರಣದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.ಸಮಾರಂಭದಲ್ಲಿ ಖ್ಯಾತ ಸಾಹಿತಿಗಳು ಮತ್ತು ನಾಟಕಕಾರರಾದ ಡಾ.ಕೆ.ವೈ.ನಾರಾಯಣಸ್ವಾಮಿ ಅವರು ಭಾಗವಹಿಸಿ ‘ಕುವೆಂಪು ನಾಟಕ ಲೋಕ' ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

 ಕುವೆಂಪು ಭಾμÁ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಚನ್ನಪ್ಪ ಕಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಧಿಕಾರದ ಸದಸ್ಯರಾದ ಡಾ.ಡಿ.ಕೆ.ಚಿತ್ತಯ್ಯ ಪೂಜಾರ್ ಅವರು ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸಲಿದ್ದು, ಕಾರ್ಯಕ್ರಮದ ಪ್ರಸ್ತಾವನೆಯ ಕಾರ್ಯವನ್ನು ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಾಧಿಕಾರದ ಸದಸ್ಯರುಗಳು ಹಾಗು ಪ್ರಾಧಿಕಾರದ ರಿಜಿಸ್ಟ್ರಾರ್ ದತ್ತಪ್ಪ ಸಾಗನೂರ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


Post a Comment

0Comments

Post a Comment (0)