ಬೆಂಗಳೂರು: 1960ರ ಮತದಾರರ ನೋಂದಣಿ ನಿಯಮಾವಳಿಗನುಸಾರವಾಗಿ 01-11-2025ರ ಅರ್ಹತಾ ದಿನಾಂಕ ವನ್ನಾಗಿಟ್ಟುಕೊಂಡು ಬೆಂಗಳೂರು ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಗೆ ತಿದ್ದುಪಡಿಗಳ ಪಟ್ಟಿ ಸಿದ್ಧಪಡಿಸಿರುವುದನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಈ ಮತದಾರರ ಪಟ್ಟಿಯ ಒಂದು ಪ್ರತಿಯನ್ನು ತಿದ್ದುಪಡಿಯ ಪಟ್ಟಿಯೊಂದಿಗೆ ಪ್ರಕಟಿಸಲಾಗಿದೆ. ಈ ಪಟ್ಟಿಯು ಬೆಂಗಳೂರು ವಿಭಾಗದ ಶಿಕ್ಷಕರ ಕ್ಷೇತ್ರ ಹಾಗೂ ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಕಛೇರಿಯಲ್ಲಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ, ಉಪವಿಭಾಗಾಧಿಕಾರಿಗಳ ಕಛೇರಿಗಳಲ್ಲಿ, ತಾಲ್ಲೂಕು ತಹಶೀಲ್ದಾರರುಗಳ ಕಛೇರಿಗಳಲ್ಲಿ ಮತ್ತು ಆಯುಕ್ತರುಗಳು, ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ ಮತ್ತು ಬೆಂಗಳೂರು ದಕ್ಷಿಣ ನಗರ ಪಾಲಿಕೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರರವರ ಕಛೇರಿಯಲ್ಲಿ ಪರಿಶೀಲನೆಗಾಗಿ ದೊರೆಯುತ್ತದೆಂದು ಬೆಂಗಳೂರು ವಿಭಾಗದ ಮತದಾರರ ನೋಂದಣಾಧಿಕಾರಿ ಹಾಗೂ ಶಿಕ್ಷಕರ ಕ್ಷೇತ್ರ ಹಾಗೂ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.