ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ?: ವಿಜಯೇಂದ್ರ

varthajala
0

 ಶಿವಮೊಗ್ಗ: ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ನಡೆಯುತ್ತಿದ್ದು, ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.ಅವರು ಇಂದು ಇಲ್ಲಿ ಮಾಧ್ಯಮಗೋಷ್ಠಿಯಲ್ಲಿÀ ಮಾತನಾಡಿದರು. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನಾಡಿನ ಕೃಷಿಕರು, ರೈತರ, ಬಡವರ, ನೇಕಾರರ ಸಮಸ್ಯೆ ಸೇರಿ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕೆಂದು ಮುಖ್ಯಮಂತ್ರಿಗಳಿಗೆ ಅಧಿವೇಶನ ಆರಂಭಕ್ಕೂ ಮೊದಲೇ ಗಮನ ಸೆಳೆದಿದ್ದೆ ಎಂದು ಹೇಳಿದರು.


ಮುಖ್ಯಮಂತ್ರಿ ವಿಷಯದಲ್ಲಿ ಪೈಪೋಟಿ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಹೇಳುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಾಗ ಒಂದು ರೀತಿ ನಿಸ್ಸಹಾಯಕರಾಗಿ ಮಾತನಾಡಿದ್ದಾಗಿ ಗಮನ ಸೆಳೆದರು. ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಕೇಳಿದರು. ಇದನ್ನು ಕಾಂಗ್ರೆಸ್ ಶಾಸಕರೇ ಕೇಳುತ್ತಿದ್ದಾರೆ ಎಂದು ನುಡಿದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು ಎಂದು ಗಮನ ಸೆಳೆದರು. ಆಡಳಿತ ಪಕ್ಷ ಮತ್ತು ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸುವ ಮತ್ತು ಸಮಸ್ಯೆಗೆ ಸ್ಪಂದಿಸಬೇಕೆಂಬ ವ್ಯವಧಾನವೂ ಇಲ್ಲದೇ ಇರುವುದು ನಿಜವಾಗಲೂ ದುರ್ದೈವ ಎಂದು ಟೀಕಿಸಿದರು.ಪರಸ್ಪರ ಕತ್ತಿ ಮಸೆಯುವ ಸಿಎಂ, ಡಿಸಿಎಂಎರಡು ವರ್ಷಗಳಿಂದ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು, ಒಬ್ಬರಿಗೆ ಒಬ್ಬರು ಕತ್ತಿ ಮಸೆಯುತ್ತಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದ ಮೇಲೆ ಆಗುತ್ತಿದೆ ಎಂದು ಹೇಳಿದರು. ಮುಖ್ಯಮಂತ್ರಿಗಳ ವಿಚಾರ ಕಾಂಗ್ರೆಸ್ಸಿನ ಆಂತರಿಕ ವಿಚಾರವಲ್ಲ; ಅವರು ರಾಜ್ಯಕ್ಕೆ ಮುಖ್ಯಮಂತ್ರಿ ಎಂದು ವಿಶ್ಲೇಷಿಸಿದರು.ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥ ಆಗಿಲ್ಲ; ರಾಜ್ಯದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಮೆಕ್ಕೆಜೋಳ ಬೆಳೆಗಾರರು ಖರೀದಿ ಕೇಂದ್ರ ಪ್ರಾರಂಭಕ್ಕೆ ಒತ್ತಾಯಿಸುತ್ತಿದ್ದಾರೆ. ಕೇಂದ್ರ ಸರಕಾರ 2400 ರೂ. ಬೆಂಬಲ ಬೆಲೆ ನಿಗದಿಪಡಿಸಿದರೂ ಸೂಕ್ತ ಸಮಯದಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಿಲ್ಲ ಎಂದು ಆಕ್ಷೇಪಿಸಿದರು. ರೈತರು ಮೆಕ್ಕೆಜೋಳವನ್ನು 1700- 1600 ರೂಪಾಯಿಗೆ ದಲ್ಲಾಳಿಗಳಿಗೆ, ಮಧ್ಯವರ್ತಿಗಳಿಗೆ ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ ಎಂದು ವಿವರಿಸಿದರು.ಬೆಳೆ ಪರಿಹಾರವನ್ನು ಘೋಷಿಸಿ 3 ತಿಂಗಳಾದರೂ ಸಮರ್ಪಕವಾಗಿ ಕೊಟ್ಟಿಲ್ಲ; ಭೀಕರ ಮಳೆಯಿಂದ ರಾಜ್ಯದಲ್ಲಿ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ ಎಂದು ಆರೋಪಿಸಿದರು. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ; ಭ್ರಷ್ಟಾಚಾರ ಮಿತಿ ಮೀರಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಾಕ್ಟರ್ ಧನಂಜಯ ಸರ್ಜಿ, ಮಾಜಿ ಶಾಸಕ ಕೆ.ಜಿ. ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿಗಳು, ಪ್ರಮುಖರು, ಮಾಧ್ಯಮದ ಪ್ರಮುಖ್ ಚಂದ್ರಶೇಖರ್ ಎಸ್. ಅವರು ಉಪಸ್ಥಿತರಿದ್ದರು

Post a Comment

0Comments

Post a Comment (0)