ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬೆಂಗಳೂರಿನ ಎಂ.ಎಸ್. ರಾಮಯ್ಯ ಕಾನೂನು ಕಾಲೇಜಿನ ಸಹಯೋಗದಲ್ಲಿ ಉಚ್ಚ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ನ್ಯಾಯ ರಥ” ವಾಹನಕ್ಕೆ ಮುಖ್ಯ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವಿಭು ಬಖ್ರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಶ್ರೀಮತಿ ಅನು ಸಿವರಾಮನ್, ಎಂ.ಎಸ್.ರಾಮಯ್ಯ ಕಾನೂನು ಕಾಲೇಜಿನ ನಿರ್ದೇಶಕರಾದ ಎಂ.ಆರ್.ಆನಂದರಾಮ್, ಎಂ.ಎಸ್.ರಾಮಯ್ಯ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉಮಾ ಮಹೇಶ್ ಸತ್ಯನಾರಾಯಣ್, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಶಶಿಧರ ಶೆಟ್ಟಿ ಉಪಸ್ಥಿತರಿದ್ದರು.