ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಚಿವ ಶಿವರಾಜ ತಂಗಡಗಿ

varthajala
0

 ಬೆಳಗಾವಿ / ಬೆಂಗಳೂರು:-ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ರ‍್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ತಿಳಿಸಿದರು.ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ, ಪರಿಷತ್ ಸದಸ್ಯರಾದ ಡಾ.ಉಮಾಶ್ರೀ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಮೂಲ ಕಾಯಿದೆ 17ನೇ ಪ್ರಕರಣದ ಆರನೇ ಉಪಪ್ರಕರಣದಂತೆ ರ‍್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕರ‍್ಯನರ‍್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ಗರಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರರ‍್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರರ‍್ಶಿತವಾಗಿದೆ ಎಂಬುದನ್ನು ಖಚಿತ ಪಡಿಸಿಕೊಳ್ಳತಕ್ಕದ್ದು ಎಂದಿದ್ದು ಕಾಯ್ದೆಯ ಅನುಷಾ್ಠನ ಜವಾಬ್ದಾರಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳದ್ದಾಗಿರುತ್ತದೆ. 


ಇದು ನಿರಂತರ ಪ್ರಕ್ರಿಯೆಯಾಗಿರುವ ಕಾರಣ ಅಪರ‍್ಣಗೊಳ್ಳುವ ಪ್ರಶ್ನೆ ಉದ್ಭವಿಸುವುದಿಲ್ಲ. ಈ ಅಧಿನಿಯಮದಂತೆ ಕ್ರಮವಹಿಸಲು ಅನುಷಾ್ಠನ ಅಧಿಕಾರಿಗಳಾದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ.ಕನ್ನಡದಲ್ಲಿ ನಾಮಫಲಕ ಅಳವಡಿಸಿಕೊಳ್ಳದ ಸಂಘ-ಸಂಸ್ಥೆಗಳ ವಿರುದ್ಧ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ನಿಯಮ 23ರ ಅನುಸಾರ ಮೊದಲನೆಯ ಅಪರಾಧಕ್ಕಾಗಿ ರೂ.5000, ಎರಡನೇ ಅಪರಾಧಕ್ಕಾಗಿ ರೂ. 10,000 ಮತ್ತು ನಂತರದ ಪ್ರತಿ ಅಪರಾಧಕ್ಕಾಗಿ ರೂ. 20,000 ರವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಮತ್ತು ಪರವಾನಗಿಯನ್ನು ರದ್ದುಗೊಳಿಸುವುದಕ್ಕೆ ಗುರಿಯಾಗುವುದು ಎಂದಿರುತ್ತದೆ. ಈ ಅಧಿನಿಯಮದಂತೆ ಕ್ರಮವಹಿಸಲು ಅನುಷಾ್ಠನ ಅಧಿಕಾರಿಗಳಾದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಸಚಿವರು ತಿಳಿಸಿದರು.


Post a Comment

0Comments

Post a Comment (0)