ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಎಲ್ಲ ಕಾಮಗಾರಿಗಳ ತ್ವರಿತಗತಿಗೆ ಕ್ರಮ: ಸಚಿವ ರಹೀಂ ಖಾನ್

varthajala
0

 ಬೆಳಗಾವಿ / ಬೆಂಗಳೂರು: ರಾಜ್ಯದ 91 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಪೋಸ್ಟ್ ಘಟಕ ನಿರ್ಮಾಣ, 310 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೆಟಿರಿಯಲ್ ರಿಕವರಿ ಫ್ಯಾಸಿಲಿಟಿ (Material Recovery facility) ನಿರ್ಮಾಣ ಮತ್ತು 226 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ಯಾನಿಟರಿ ಲ್ಯಾಂಡಫಿಲ್ ಫ್ಯಾಸಿಲಿಟಿ (Sanitary Landfill Facility) ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿರುತ್ತವೆ ಎಂದು ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರು ಹೇಳಿದರು.

ವಿಧಾನ ಪರಿಷತ್ತಿನಲ್ಲಿಂದು ಸದಸ್ಯರಾದ ಶರವಣ ಟಿ ಎ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಸ್ತುತ ರಾಜ್ಯದ 320 ನಗರ ಸ್ಥಳೀಯ ಸಂಸ್ಥೆಗಳಲ್ಲಿ (ಬಿ.ಬಿ.ಎಂ.ಪಿ. ಹೂರತುಪಡಿಸಿ) ಪ್ರತಿ ದಿನ ಅಂದಾಜು 3988 ಗಳಷ್ಟು ಹಸಿ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, 3650 ಟನ್ ಗಳಷ್ಟು ತ್ಯಾಜ್ಯ ಸಂಸ್ಕರಣೆಯಾಗುತ್ತಿದೆ ಮತ್ತು 2651 ಟನ್ ಗಳಷ್ಟು ಒಣ ತ್ಯಾಜ್ಯ ಉತ್ಪಾದನೆಯಾಗುತ್ತಿದ್ದು, ಅದರ ಪೈಕಿ, 1780 ಟನ್ ಗಳಷ್ಟು ಒಣ ತ್ಯಾಜ್ಯವನ್ನು ನಿರ್ವಹಣೆ ಮಾಡಲಾಗುತ್ತಿದೆ. ಮುಂದಿನ ಐದು ವರ್ಷಗಳಿಗೆ ಅಗತ್ಯವಿರುವ ಮೂಲಸೌಕರ್ಯ ಮತ್ತು ಪ್ರಸ್ತುತ ಇರುವ ಕೊರತೆಯನ್ನು ನಿವಾರಿಸಲು ಸ್ವಚ್ಚ ಭಾರತ ಮಿಷನ್ (ನಗರ) 2.0 ಯೋಜನೆಯಡಿಯಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.
222 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಂಗ್ರಹವಾಗಿರುವ 78.26 ಲಕ್ಷ ಟನ್ ಗಳಷ್ಟು ಪಾರಂಪರಿಕ ತ್ಯಾಜ್ಯವನ್ನು ತೆರವುಗೊಳಿಸುವ ಸಲುವಾಗಿ ಬಯೋ ರಿಮಿಡಿಯೇಶನ್ ಕಾರ್ಯ ನಡೆಯುತ್ತಿದ್ದು, ಇಲ್ಲಿಯವರೆಗೆ 22.7 ಲಕ್ಷ ಟನ್ ಗಳಷ್ಟು ತ್ಯಾಜ್ಯ ಬಯೋ ರಿಮಿಡಿಯೇಶನ್ ಮೂಲಕ ವಿಲೇವಾರಿ ಮಾಡಲಾಗಿರುತ್ತದೆ ಎಂದು ಸಚಿವರು ತಿಳಿಸಿದರು.

ಎಲ್ಲಾ ಕಾಮಗಾರಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ತ್ಯರಿತಗತಿಯಲ್ಲಿ ಕೈಗೊಂಡು ಮೂಲಭೂತ ಸೌಲಭ್ಯಗಳನ್ನು ಸ್ಥಾಪಿಸಿ, ಸಂಸ್ಕರಣೆ ಮಾಡಿ ತ್ಯಾಜ್ಯ ವಸ್ತುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವುದನ್ನು ಖಾತ್ರಿಪಡಿಸಿಕೊಳ್ಳಲು ಸರ್ಕಾರದ ವತಿಯಿಂದ ನಿಯಮಿತವಾಗಿ ಪ್ರಗತಿ ಪರಿಶೀಲನೆ ಸಭೆಗಳನ್ನು ನಡೆಸಲಾಗುತ್ತಿದೆ. ಪ್ರತಿ ಮಾಹೆ ಆಯಾ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಸಾಧಿಸಿರುವ ಪ್ರಗತಿಯ ವರದಿ ನೀಡಿ ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಿ ನಿಗಧಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಅಗತ್ಯವಿರುವ ಕ್ರಮಗಳನ್ನು ಸಮಾರೋಪಾದಿಯಲ್ಲಿ ಕೈಗೊಳ್ಳಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆಗಳನ್ನು ನಿಯಮಿತವಾಗಿ ನೀಡಲಾಗುತ್ತಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.

Post a Comment

0Comments

Post a Comment (0)