ಬೆಂಗಳೂರು ಜಲಮಂಡಳಿ ಅಧ್ಯಕ್ಷರಿಂದ ನೇರ ಫೋನ್ ಇನ್ ಕಾರ್ಯಕ್ರಮ

varthajala
0

 ಬೆಂಗಳೂರು: ಬೆಂಗಳೂರು ಜಲಮಂಡಳಿಯ ವತಿಯಿಂದ ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ ಡಿಸೆಂಬರ್  26ರಂದು ಶುಕ್ರವಾರ ಬೆಳಿಗ್ಗೆ 09:30 ರಿಂದ 10:30 ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.

ಸಾರ್ವಜನಿಕರು ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119 ಮತ್ತು 080-22229639.ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಬಹುದು. ಸಾರ್ವಜನಿಕರು ಈ ನೇರ ಫೋನ್-ಇನ್ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳುವಂತೆ ಜಲಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)