ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಸಂಬಂಧಿಗಳಿಗೆ ಪಿ.ಎಂ.ಎನ್.ಆರ್.ಎಫ್ ನಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಅವರು ಘೋಷಿಸಿದ್ದಾರೆ.
ಪಿಎಂಒ ಇಂಡಿಯಾ ತನ್ನ ಎಕ್ಸ್ X ಖಾತೆಯಲ್ಲಿ ಹೀಗೆ ಹೇಳಿದೆ.“ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಅಪಘಾತದಿಂದ ಜೀವಹಾನಿಯಾಗಿವುದು ನೋವುಂಟು ಮಾಡಿದೆ. ಈ ಸಂಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.ಮೃತರ ಸಂಬಂಧಿಕರಿಗೆ ಪಿ.ಎಂ.ಎನ್.ಆರ್.ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ನೀಡಲಾಗುವುದು: