ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ

varthajala
0

 ಬೆಂಗಳೂರು: ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮೊಬೈಲ್ ಆಧಾರಿತ ಹಾಜರಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಿ ಆದೇಶ ಹೊರಡಿಸಿದೆ.ಇಲಾಖೆಯು ಈಗಾಗಲೇ ಚಾಲ್ತಿಯಲ್ಲಿದ್ದ ಬಯೋಮೆಟ್ರಿಕ್ ಹಾಜರಾತಿಯನ್ನು ರದ್ದುಗೊಳಿಸಿ, ಮೊಬೈಲ್ ಆಧಾರಿತ ಹಾಜರಾತಿಯ (ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ) ಮೂಲಕ ಕಡ್ಡಾಯವಾಗಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಾತಿ ನೀಡಬೇಕೆಂದು ಎಂದು ಸೂಚಿಸಿದೆ.


ಈ ಹೊಸ ಹಾಜರಾತಿ ವ್ಯವಸ್ಥೆಯನ್ನು ಅನುಸರಿಸದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವೇತನವನ್ನು ಕಡಿತಗೊಳಿಸುವುದರ ಜೊತೆಗೆ ನಡತೆ ನಿಯಮದ ಉಲ್ಲಂಘನೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಧಾನ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)