ಬೆಂಗಳೂರು: ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾμÁ ಸಂವರ್ಧನೆ, ಕಲೆ, ಸಾಹಿತ್ಯ ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025-26ನೇ ಸಾಲಿನ ಸಾಮಾನ್ಯ/ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾಸಿಂಧು Sevasindhu.karnataka.gov.in ಮುಖಾಂತರ 2025 ನೇ ಡಿಸೆಂಬರ್ 01 ರಿಂದ 30 ರವರೆಗೆ ಕಾಲಾವಕಾಶ ನೀಡಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಈ ಯೋಜನೆಗಳಿಗೆ ಅರ್ಜಿ ಸಲ್ಲಿಕೆಯ ಕಾಲಾವಧಿಯನ್ನು 10 ದಿನಗಳು ವಿಸ್ತರಿಸಲಾಗಿದ್ದು, ಆಸಕ್ತರು 2026 ಜನವರಿ 9 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಾಕಾಶ ನೀಡಲಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.