ಬೆಂಗಳೂರು-ಮೈಸೂರ ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನಾ ಪ್ರಾಧಿಕಾರ ವ್ಯಾಪ್ತಿಯಲ್ಲಿ ವಿನ್ಯಾಸ ನಕ್ಷೆ ಅನುಮೋದನೆಗೆ ಕ್ರಮ

varthajala
0

 ಬೆಳಗಾವಿ / ಬೆಂಗಳೂರು: ಬೆಂಗಳೂರು-ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನಾ ಪ್ರಾಧಿಕಾರ ವ್ಯಾಪ್ತಿಯ ರೈತರ ಅನುಕೂಲಕ್ಕಾಗಿ ಕ್ರಮ ವಹಿಸಲಾಗಿದ್ದು, ವಿನ್ಯಾಸ ನಕ್ಷೆ ಅನುಮೋದನೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಪ್ರಾಧಿಕಾರದಿಂದ ನಿಯಮಾನುಸಾರ ಅನುಮೋದನೆ ನೀಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನ ಪರಿಷತ್ತಿನಲ್ಲಿಂದು ಸದಸ್ಯರಾದ ಮಧು ಜಿ ಮಾದೇಗೌಡ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಬಿಎಂಐಸಿಎಪಿಎ ವ್ಯಾಪ್ತಿಯ ರೈತರಿಗೆ ಮನೆ ಕಟ್ಟಲು, ಭೂ ಪರಿವರ್ತನೆ ಮತ್ತು ವಿನ್ಯಾಸ ನಕ್ಷೆ ಅನುಮೋದನೆ ಅಥವಾ ಭೂ ಉಪಯೋಗ ಬದಲಾವಣೆ ಪಡೆಯಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಆನ್ ಲೈನ್ ಮುಖಾಂತರ ಪ್ರಾಧಿಕಾರದಲ್ಲಿ ಸ್ವೀಕೃತಗೊಳ್ಳುವ ಭೂ ಪರಿವರ್ತನೆಗೆ ಸಂಬಂಧಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ನಿಗದಿತ ಅವಧಿಯಲ್ಲಿ ತಾಂತ್ರಿಕ ಅಭಿಪ್ರಾಯ ನೀಡಲಾಗುತ್ತಿದೆ. ಭೂ ಉಪಯೋಗ ಬದಲಾವಣೆ ಪ್ರಸ್ತಾವನೆಗಳನ್ನು ನಿಯಮಾನುಸಾರ ಪರಿಶೀಲಿಸಿ ಕ್ರಮವಹಿಸಲಾಗುತ್ತಿದೆ ಎಂದರು.
ಬಿಎಂಐಸಿಎಪಿಎ ಈಗಲೂ ಚಾಲ್ತಿಯಲ್ಲಿದೆ ಎಂದು ಸ್ಪಷ್ಟಪಡಿಸಿದ ಉಪ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ ಹಾಗೂ ಮೆ.ನೈಸ್ ಸಂಸ್ಥೆಯ ಮಧ್ಯೆ ಫ್ರೇಮ್ ವರ್ಕ್ ಅಗ್ರಿಮೆಂಟ್ ಅನ್ವಯ, ಬಿಎಂಐಸಿ ಕಾರಿಡಾರ್ ನಲ್ಲಿ ಬರುವ ಬೆಳವಣಿಗೆಗಳನ್ನು ಯೋಜನಾ ಬದ್ಧವಾಗಿ ಕಾರ್ಯಗತಗೊಳಿಸಲು ಪ್ರಾಧಿಕಾರದ ಅಗತ್ಯತೆ ಇರುತ್ತದೆ ಎಂದು ತಿಳಿಸಿದರು

Post a Comment

0Comments

Post a Comment (0)