ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಡಿಸೆಂಬರ್ 30 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಸಂತಕವಿ ಕನಕದಾಸ ಮತ್ತು ತತ್ವ ಪದಕಾರ ಅಧ್ಯಯನ ಕೇಂದ್ರ ಮತ್ತು ಪ್ರಜಾವಾಣಿ
ಪತ್ರಿಕೆಯ ಸಹಯೋಗದಲ್ಲಿ ಆಯೋಜಿಸಿರುವ “ಮಾಧ್ಯಮದಲ್ಲಿ ಕನಕ ಪ್ರಜ್ಞೆ” ಎಂಬ ವಿಚಾರ ಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ. ಅಂದೇ ಸಂಜೆ ಕೇಂದ್ರಸ್ಥಾನಕ್ಕೆ ಹಿಂದಿರುಗಲಿದ್ದಾರೆ ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.