ಕೆಪಿಎಸ್‍ಸಿ: ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಅವಕಾಶ

varthajala
0

 ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚಿಸಲಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೈದ್ರಾಬಾದ್-ಕರ್ನಾಟಕ ವೃಂದದ 97 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ತಾತ್ಕಾಲಿಕ ಆಯ್ಕೆಪಟ್ಟಿಯನ್ನು 2025 ಡಿಸೆಂಬರ್ 17 ರಂದು ಆಯೋಗದ http://kpsc.kar.nic.in-Lists - Provisional Selection List  ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ಸದರಿ ತಾತ್ಕಾಲಿಕ ಆಯ್ಕೆಪಟ್ಟಿ ಸಂಬಂಧ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಈ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ 07 ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ ಬೆಂಗಳೂರು-560001 ಇವರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಹಾಗೂ ಕೊನೆಯ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)