ಬೆಂಗಳೂರು: 1960ರ ಮತದಾರರ ನೋಂದಣಿ ನಿಯಮಾವಳಿಗನುಸಾರವಾಗಿ 01-11-2025ರ ಅರ್ಹತಾ ದಿನಾಂಕವನ್ನಾಗಿಟ್ಟುಕೊಂಡು ಕರ್ನಾಟಕ ಆಗ್ನೆಯ ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಗೆ ತಿದ್ದುಪಡಿಗಳ ಪಟ್ಟಿ ಸಿದ್ದಪಡಿಸಿರುವುದನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಈ ಮತದಾರರ ಪಟ್ಟಿಯ ಒಂದು ಪ್ರತಿಯನ್ನು ತಿದ್ದುಪಡಿಯ ಪಟ್ಟಿಯೊಂದಿಗೆ ಪ್ರಕಟಿಸಲಾಗಿದೆ. ಈ ಪಟ್ಟಿಯು ಬೆಂಗಳೂರು ವಿಭಾಗದ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಪ್ರಾದೇಶಿಕ ಆಯುಕ್ತರ ಕಛೇರಿಯಲ್ಲಿ ಹಾಗೂ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮತ್ತು ಉಪವಿಭಾಗಾಧಿಕಾರಿಗಳ ಕಛೇರಿಯಲ್ಲಿ ಮತ್ತು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ (ದಾವಣಗೆರೆ, ಜಗಳೂರು ಮತ್ತು ಹರಿಹರ ತಾಲ್ಲೂಕುಗಳ) ಜಿಲ್ಲೆಗಳ ತಾಲ್ಲೂಕು ತಹಶೀಲ್ದಾರರುಗಳ ಕಛೇರಿಗಳಲ್ಲಿ ಮತ್ತು ಆಯುಕ್ತರು, ತುಮಕೂರು ಮಹಾನಗರ ಪಾಲಿಕೆ ಮತ್ತು ದಾವಣಗೆರೆ ಮಹಾನಗರ ಪಾಲಿಕೆರವರ ಕಛೇರಿಯಲ್ಲಿ ಪರಿಶೀಲನೆಗಾಗಿ ದೊರೆಯುತ್ತದೆಂದು ಎಂದು ಬೆಂಗಳೂರು ವಿಭಾಗದ ಮತದಾರರ ನೋಂದಣಾಧಿಕಾರಿ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರ ಹಾಗೂ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.