ಅನ್ನಪೂರ್ಣೇಶ್ವರಿ ಹ್ಯುಮಾನಿಟಿ ಫೌಂಡೇಶನ್ ಹಾಗೂ ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಮಾನವ ದಿನಾಚರಣೆ ವಿಚಾರ ಸಂಕಿರಣ, ಅನ್ನಪೂರ್ಣೇಶ್ವರಿ ಫೌಂಡೇಶನ್ ಮೂರನೇ ವಾರ್ಷಿಕೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ಜೆ.ಸಿ.ರಸ್ತೆಯ ರವೀಂದ್ರ ಕಲಾಕ್ಷೇತ್ರ, ಕನ್ನಡ ಭವನ ಆವರಣದ ನಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಸಾಹಿತ್ಯ, ಅಧ್ಯಾತ್ಮ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿ ಬಹುಮುಖ ಸಾಧನೆ ಮಾಡಿರುವ ಡಾ. ಗುರುರಾಜ್ ಪೋಶೆಟ್ಟಿಹಳ್ಳಿ ಅವರು ಕನ್ನಡದ ವಿಶಿಷ್ಟ ಅಕ್ಷರಸಾಧಕರು. ಸಾಂಸ್ಕೃತಿಕ ಹಾಗೂ ಧಾರ್ಮಿಕ ವೇದಿಕೆಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿರುವ ಅವರು, ಪರಂಪರೆಯ ಮೌಲ್ಯಗಳನ್ನು ಸಮಕಾಲೀನ ದೃಷ್ಟಿಕೋನದಲ್ಲಿ ಸಮಾಜದ ಮುಂದಿಟ್ಟಿದ್ದಾರೆ. ಅವರ ಈ ಸಾರ್ಥಕ ಸಾಧನೆಯನ್ನು ಗುರುತಿಸಿ, ಸಮಾಜಮುಖಿ ಸಾಹಿತ್ಯ–ಸಾಂಸ್ಕೃತಿಕ ಸೇವೆಗೆ ವಿಶ್ವಕರ್ಮ ಅಭಿವೃದ್ಧಿ ಫೌಂಡೇಷನ್ ಉದ್ಘಾಟನೆಯ ಸಂದರ್ಭದಲ್ಲಿ ‘ ನುಡಿ ನಿಪುಣ’ ಎಂಬ ಈ ಪ್ರಶಸ್ತಿಯನ್ನು ಪ್ರದಾನಿಸಲಾಗಿದೆ.ಅಧ್ಯಯನ, ಸೇವೆ ಮತ್ತು ಸಂಸ್ಕಾರಗಳ ಸಮನ್ವಯದೊಂದಿಗೆ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಿದ ಇವರ ಕಾರ್ಯಚಟುವಟಿಕೆಗಳು ಸಮುದಾಯದ ಚಿಂತನೆಗೆ ದಿಕ್ಕು ನೀಡಿವೆ., ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಹಾಗೂ ಮಾನವೀಯ ಮೌಲ್ಯಗಳ ಬಲವರ್ಧನದಲ್ಲಿ ಇವರ ಪಾತ್ರ ಗಮನಾರ್ಹವಾಗಿದೆಎಂದು ಕಾರ್ಯಕ್ರಮದ ಆಯೋಜಕರಾದ ಅನ್ನಪೂರ್ಣೇಶ್ವರಿ ಹ್ಯುಮಾನಿಟಿ ಫೌಂಡೇಶನ್ ಬೆಳಗಾವಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷ ಮಹಾಂತೇಶ ಎಸ್ ಕಡಲಗಿ ಮತ್ತು ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ ಅಧ್ಯಕ್ಷ ನಿತ್ಯಾ ಎಂ ಆಚಾರ್ ತಿಳಿಸಿದ್ದಾರೆ.ಬೆಳಗಾವಿ ಭೂತರಾಮನಹಟ್ಟಿ ಶ್ರೀಕ್ಷೇತ್ರ ಮುಕ್ತಿ ಮಠದ ಪರಮಪೂಜ್ಯ ಮಹರ್ಷಿ ತಪೋ ರತ್ನ ಶಿವಾಚಾರ್ಯರು – ಶಿವಸಿದ್ಧ ಸೋಮೇಶ್ವರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ವಿಶ್ವಕರ್ಮ ಅಭಿವೃದ್ದಿ ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ ನ ಲೋಗೋ ಲೋಕಾರ್ಪಣೆ ಮಾಡಿದರು .
ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಬರಮಣ್ಣ ಲಕ್ಷ್ಮಣ ಉಪ್ಪಾರ, ಕೆಪಿಸಿಸಿ ಪರಿಶಿಷ್ಟ ಪಂಗಡದ ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್ ದೊರೆ ಅಲ್ದಾಳ, ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲೆ ಉಪಾಧ್ಯಕ್ಷ ಶ್ರೀ ರಾಜು ಮಹಾದೇವ ನಾಶಿಪುಡಿ, ಬಾಗಲಕೋಟೆ ಜಿಲ್ಲೆಯ ಸಮಾಜ ಸೇವಕಿ ಶ್ರೀಮತಿ ನವನೀತ ಗೋವಿಂದರಾಜ ಮುಳಗುಂದ, ವಿಜಯ ಕರ್ನಾಟಕ ರಕ್ಷಣಾ ವೇದಿಕೆ ರಾಮನಗರ ರಾಜ್ಯಾಧ್ಯಕ್ಷ ಎಂ.ಟಿ ಮಹೇಶ್ ಕುಮಾರ್ ಮೊದಲಾದವರು ವೇದಿಕೆಯಲ್ಲಿದರು. ಸಾಹಿತ್ಯ, ಅಧ್ಯಾತ್ಮ ಹಾಗೂ ಸಂಸ್ಕೃತಿ ಕ್ಷೇತ್ರಗಳಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಗುರುರಾಜ್ ಪೋಶೆಟ್ಟಿಹಳ್ಳಿ ಕನ್ನಡದ ಪರಿಚಿತ ಬರಹಗಾರರು. ವೇದ, ಪುರಾಣ, ದಾಸಸಾಹಿತ್ಯ, ವಚನ ಪರಂಪರೆ, ಗುರುತತ್ತ್ವ ಮೊದಲಾದ ವಿಷಯಗಳನ್ನು ಸರಳ ಭಾಷೆಯಲ್ಲಿ ಜನರಿಗೆ ತಲುಪಿಸುವಲ್ಲಿ ಅವರು ವಿಶಿಷ್ಟ ಸ್ಥಾನ ಪಡೆದಿದ್ದಾರೆ.ಎಂ.ಎ. ಕನ್ನಡ ಪದವಿಧರರಾದ ಅವರು ಲೇಖಕ, ಸಂಪಾದಕ, ಅಂಕಣಕಾರ ಹಾಗೂ ಸಾಂಸ್ಕೃತಿಕ ಸಂಘಟಕರಾಗಿ ಹಲವು ವರ್ಷಗಳಿಂದ ಕಾರ್ಯನಿರತರಾಗಿದ್ದಾರೆ. ರಾಜ್ಯದ ವಿವಿಧ ಪತ್ರಿಕೆಗಳು ಹಾಗೂ ಮಾಸಪತ್ರಿಕೆಗಳಲ್ಲಿ ಅವರ ನೂರಾರು ಲೇಖನಗಳು ಪ್ರಕಟಗೊಂಡಿವೆ. ಹಲವಾರು ಕೃತಿಗಳ ರಚನೆ ಮತ್ತು ಸಂಪಾದನೆಯ ಮೂಲಕ ಅವರು ಕನ್ನಡ ಸಾಹಿತ್ಯಕ್ಕೆ ಕೊಡುಗೆ ನೀಡಿದ್ದಾರೆ.
ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿರುವ ಅವರು, ಸಮಾಜಮುಖಿ ಚಿಂತನೆಗಳೊಂದಿಗೆ ಸಂಸ್ಕೃತಿಯ ಮೌಲ್ಯಗಳನ್ನು ಪ್ರಚಾರ ಮಾಡುತ್ತಿದ್ದಾರೆ. ಪರಂಪರೆಯ ಜ್ಞಾನವನ್ನು ಇಂದಿನ ತಲೆಮಾರಿಗೆ ಅರ್ಥವಾಗುವ ರೀತಿಯಲ್ಲಿ ಮಂಡಿಸುವ ಅವರ ಪ್ರಯತ್ನಗಳಿಗೆ ಹಲವು ಪ್ರಶಸ್ತಿಗಳು ಮತ್ತು ಗೌರವಗಳು ಲಭಿಸಿವೆ