ನೇಮಕಾತಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ- ಮುಖ್ಯಮಂತ್ರಿ ಸಿದ್ದರಾಮಯ್ಯ

varthajala
0

ಬೆಳಗಾವಿ / ಬೆಂಗಳೂರು:-ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷಾ್ಠನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪೊ್ರೀತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪೊ್ರೀತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು.

ರಾಜ್ಯ ಸರ್ಕಾರ ಒಲಂಪಿಕ್ಸ್, ಪ್ಯಾರಾಒಲಂಪಿಕ್ಸ್, ಕಾಮನ್‍ವೆಲ್ತ್, ಏಷಿಯನ್ ಗೇಮ್ಸ್ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ 13 ಕ್ರೀಡಾಪಟುಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಲ್ಲಿ 70 ಕಾನ್ಸ್ ಟೇಬಲ್‍ಗಳಿಗೆ ನೇರ ನೇಮಕಾತಿ ಹಾಗೂ 14 ಪಿಎಸ್ ಐ ಗಳನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಅಲ್ಲದೇ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಲಾಗುವುದು. ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು.

Post a Comment

0Comments

Post a Comment (0)