ವಿಧಾನಸಭೆಯಲ್ಲಿ ವಿಧೇಯಕಗಳ ಮಂಡನೆ

varthajala
0

 


ಬೆಳಗಾವಿ / ಬೆಂಗಳೂರು, 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ ಮತ್ತು ನಿಯಂತ್ರಣ) ವಿಧೇಯಕವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಪ್ರಸ್ತಾವವನ್ನು ಅಂಗೀಕರಿಸಲಾಯಿತು.2025ನೇ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ ಹಾಗೂ 2025ನೇ ಸಾಲಿನ ಕರ್ನಾಟಕ ಸಿನಿ ಮತ್ತು ಸಾಂಸ್ಕøತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) (ತಿದ್ದುಪಡಿ) ವಿಧೇಯಕಗಳನ್ನು ಕಾರ್ಮಿಕ ಸಚಿವ ಸಂತೋμï ಲಾಡ್ ಮಂಡಿಸಿದರು. ವಿಧೇಯಕದ ಪ್ರಸ್ತಾವವು ವಿಧಾನಸಭೆಯಲ್ಲಿ ಅಂಗೀಕಾರವಾಯಿತು.2025ನೇ ಸಾಲಿನ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2025ನೇ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಔಷಧ ಮತ್ತು ಪ್ರಸಾಧನ ಸಾಮಗ್ರಿ (ಕರ್ನಾಟಕ ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ಎರಡನೇ ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಬಯಲುಸೀಮೆ ಪ್ರದೇಶಾಭಿವೃಧ್ಧಿ ಮಂಡಲಿ (ತಿದ್ದುಪಡಿ) ವಿಧೇಯಕ, 2025ನೇ ಸಾಲಿನ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಲಿ (ತಿದ್ದುಪಡಿ) ವಿಧೇಯಕಗಳನ್ನು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕಗಳ ಪ್ರಸ್ತಾವವು ವಿಧಾನಸಭೆಯಲ್ಲಿ ಅಂಗೀಕಾರವಾಯಿತು.

Post a Comment

0Comments

Post a Comment (0)