ಬೆಂಗಳೂರು : ಜವಳಿ ಮಂತ್ರಾಲಯ, ನವದೆಹಲಿ, ಕೇಂದ್ರ ಸರ್ಕಾರ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ, ನೇಕಾರರ ಮಹಾ ಮಂಡಳ ನಿಯಮಿತ (ಕಾವೇರಿ ಹ್ಯಾಂಡ್ ಲೂಮ್ಸ್), ಬೆಂಗಳೂರು ಇವರ ¸ಹಯೋಗದೊಂದಿಗೆ 2025-26 ನೇ ಸಾಲಿನ ರಾಷ್ಟ್ರೀಯ ಕೈಮಗ್ಗ ಮೇಳ-2026 (ಗಾಂಧಿ ಬುನಕರ್ ಮೇಳ) ವನ್ನು ಜನವರಿ 02 ರಿಂದ ಜನವರಿ 15, 2026 ರವರೆಗೆ ಬೆಂಗಳೂರಿನ ಮಹಾಲಕ್ಷಿಪುರಂ ಲೇಔಟ್‍ನ ರಾಣಿ ಅಬ್ಬಕ್ಕ ಆಟದ ಮೈದಾನ (ಕಮಲಮ್ಮನ ಗುಂಡಿ)ದಲ್ಲಿ ಹಮ್ಮಿಕೊಳ್ಳಲಾಗಿದೆ.ಜನವರಿ 02 ರಂದು ಮಧ್ಯಾಹ್ನ 12.30 ಕ್ಕೆ ಉದ್ಘಾಟನಾ ಸಮಾರಂಭವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ. ಕೈಮಗ್ಗ ಮತ್ತು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆಯ ಸಚಿವರಾದ ಶಿವಾನಂದ ಎಸ್. ಪಾಟೀಲ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಕೇಂದ್ರದ ಜವಳಿ ಖಾತೆ ಸಚಿವರಾದ ಗಿರಿರಾಜ್ ಸಿಂಗ್, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹಾಗೂ ಕೇಂದ್ರ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಹಾಲಕ್ಷ್ಮಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಗೋಪಾಲಯ್ಯ ಮತ್ತು ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳ ನಿ., (ಕಾವೇರಿ ಹ್ಯಾಂಡ್ ಲೂಮ್ಸ್), ಅಧ್ಯಕ್ಷರಾದ ಬಿ.ಜೆ.ಗಣೇಶ್ ಸೇರಿದಂತೆ ಇನ್ನಿತರೆ ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳ ನಿಯಮಿತದ (ಕಾವೇರಿ ಹ್ಯಾಂಡ್ ಲೂಮ್ಸ್) ವ್ಯವಸ್ಥಾಪಕ ನಿರ್ದೇಶಕರಾದÀ ಸೌಮ್ಯ. ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.