ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ರ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಿದೆ. ಸ್ನಾತಕ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ., ಬಿ.ಲಿಬ್.ಐ. ಎಸ್ಸಿ. ಮತ್ತು ಸ್ನಾತಕೋತ್ತರ ಕೋರ್ಸುಗಳಾದ ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ. ಹಾಗೂ ಯುಜಿ/ಪಿಜಿ ಡಿಪ್ಲ್ಲೊಮಾ ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ ಜನವರಿ 09 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ ಇಲ್ಲಿ ಆನ್ ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದೆ. ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳನ್ನು ನೀಡಿದ್ದು, ಪ್ರವೇಶಾತಿಗೆ ಲಾಗಿನ್ ಮಾಡಿ ಮಾಹಿತಿ ಪಡೆಯಬಹುದಾಗಿದೆ. ಆಸಕ್ತ ಅರ್ಹ ವಿದ್ಯಾರ್ಥಿಗಳು ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿ ನಂತರ ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬಹುದು.
ಕೆಎಸ್‍ಒಯು: 2025-26ನೇ ಸಾಲಿನ ಜನವರಿ ಆವೃತ್ತಿಯ ಪ್ರವೇಶಾತಿ ಪ್ರಾರಂಭ
January 13, 2026
0
ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98805-26439/90195-26439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿರ್ದೇಶಕರಾದ ಡಾ. ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.