2026 ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ ಸಮಾರಂಭ

varthajala
0

 ಬೆಂಗಳೂರು : ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘದ ವತಿಯಿಂದ “2026 ನೇ ಸಾಲಿನ ತಾಂತ್ರಿಕ ದಿನಚರಿ ಬಿಡುಗಡೆ” ಸಮಾರಂಭವನ್ನು ಜನವರಿ 17ರಂದು ಮಧ್ಯಾಹ್ನ 3 ಗಂಟೆಗೆ ಜಲಮಂಡಳಿಯ ಸಭಾಂಗಣ, 4ನೇ ಮಹಡಿ, ಬೆಂಗಳೂರು ಜಲಮಂಡಳಿ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು-09, ಇಲ್ಲಿ ಆಯೋಜಿಸಲಾಗಿದೆ. ಸಮಾರಂಭದ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಹಾಗೂ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಸಿಎಸ್‍ಟಿ ಭಾರತೀಯ ವಿಜ್ಞಾನ ಸಂಸ್ಥೆ ಅಧ್ಯಕ್ಷರು ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗದ  ಪ್ರಾಧ್ಯಾಪಕರಾದ ಡಾ.ಮಾಧವಿ ಲತಾ ಜಿ ಅವರು ವಹಿಸಲಿದ್ದಾರೆ. 

ಸಮಾರಂಭದಲ್ಲಿ 2025 ರ ಅವಧಿಯಲ್ಲಿ ನಿವೃತ್ತಿ ಹೊಂದಿದ ಅಭಿಯಂತರರಿಗೆ ಸನ್ಮಾನ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭದಲ್ಲಿ ಬೆಂಗಳೂರು ಜಲಮಂಡಳಿ ಅಭಿಯಂತರರ ಸಂಘದ ಅಧ್ಯಕ್ಷರಾದ ಇಂಜಿನಿಯರ್ ಬಿ.ಸಿ.ಗಂಗಾಧರ, ಉಪಾಧ್ಯಕ್ಷರಾದ ಇಂಜಿನಿಯರ್ ರಮಾನಂದ, ಕಾರ್ಯದರ್ಶಿಗಳಾದ ಇಂಜಿನಿಯರ್ ಎ. ರಾಜಶೇಖರ್, ಖಜಾಂಚಿಗಳಾದ ಇಂಜಿನಿಯರ್ ಚಂದ್ರಶೇಖರ್.ಎಸ್ ರವರು ಹಾಗೂ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, ಹೊರವಲಯದ ಅಭಿಯಂತರರ ಪ್ರತಿನಿಧಿಗಳು, ನಿವೃತ್ತ ಅಭಿಯಂತರರ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Post a Comment

0Comments

Post a Comment (0)