ಬೆಂಗಳೂರು : ಸಾರಿಗೆ ಇಲಾಖೆಯ ವತಿಯಿಂದ ರಸ್ತೆ ಸುರಕ್ಷತೆ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಸ್ತೆ ಸುರಕ್ಷತಾ ಮಾಸಾಚರಣೆ ಪ್ರಯುಕ್ತ 2026 ನೇ ಫೆಬ್ರವರಿ 01 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಬೇಕಾಗಿದ್ದ “ಸೇಫಥಾನ್-2026” ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.ಈಗಾಗಲೇ ನೋಂದಣಿ ಮಾಡಿಕೊಂಡಿರುವವರು ಮರು ನಿಗದಿಯಾದ ದಿನಾಂಕದಂದು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಅಪರ ಸಾರಿಗೆ ಆಯುಕ್ತರು (ಪ್ರವರ್ತನ-ದಕ್ಷಿಣ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Post a Comment
0Comments