ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ 2026ನೇ ಸಾಲಿನ ಕ್ಯಾಲೆಂಡರನ್ನು ಸಮಾಜ ಕಲ್ಯಾಣ ಸಚಿವರ ಗೃಹ ಕಚೇರಿಯಲ್ಲಿಂದು ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ಬಿಡುಗಡೆ ಮಾಡಿದರು. ಭೋವಿ ಸಮುದಾಯದ ಅಭಿವೃದ್ಧಿಗೆ ಸಾಮಾಜಿಕ ಹಾಗೂ ಆರ್ಥಿಕವಾಗಿ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ನಿಗಮವನ್ನು ಸ್ಥಾಪಿಸಲಾಗಿದ್ದು, ನಿಗಮದಲ್ಲಿ ಅನುμÁ್ಠನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿಯಲ್ಲಿ ಆರ್ಥಿಕ ಸೌಲಭ್ಯಗಳನ್ನು ನೀಡಲಾಗುತ್ತದೆ ಮತ್ತು ನಿಗಮದ ಕಾರ್ಯಚಟುವಟಿಕೆಗಳನ್ನು ಪ್ರತಿಬಿಂಬಿಸುವ ರೀತಿಯಲ್ಲಿ ಕ್ಯಾಲೆಂಡರ್ ರೂಪಿಸಲಾಗಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ಹಾಗೂ ಮಡಿವಾಳ ಗುರುಪೀಠದ ಬಸವ ಮಾಚಿದೇವ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಎಂ. ರಾಮಪ್ಪ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯುಬ್ ಖಾನ್, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಯು. ಚಂದ್ರನಾಯ್ಕ್, ಸಮಾಜ ಕಲ್ಯಾಣ ಇಲಾಖೆಯ ಸಚಿವರ ಆಪ್ತ ಕಾರ್ಯದರ್ಶಿಗಳಾದ ರಾಜೇಂದ್ರ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.