ಕೆಎಎಸ್ ಪರೀಕ್ಷೆಯ ಪೂರ್ವಭಾವಿ ತರಬೇತಿ ಸಂಸ್ಥೆ: ಜನವರಿ 20 ರಂದು ಅಭ್ಯರ್ಥಿಗಳ ಕೌನ್ಸಿಲಿಂಗ್

varthajala
0

 ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆಯ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಅನುಷ್ಠಾನ ಮಾಡಲಾಗುತ್ತಿರುವ ಕೆಎಎಸ್ ಪರೀಕ್ಷೆಯ ಪೂರ್ವಭಾವಿ ತರಬೇತಿ ಸಂಸ್ಥೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನಿಯೋಜಿಸಲು ಕೌನ್ಸಿಲಿಂಗ್‍ನ್ನು ಜನವರಿ 20 ರಂದು ಬೆಳಿಗ್ಗೆ 9.00 ಗಂಟೆಗೆ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ,


ಡಾ.ಬಾಬು ಜಗಜೀವನ್ ರಾಂ ಭವನ, ಮಾಗಡಿ ಮುಖ್ಯ ರಸ್ತೆ, ಔಟರ್ ರಿಂಗ್ ರೋಡ್ ಸುಮ್ಮನಹಳ್ಳಿ ವೃತ್ತ, ಬೆಂಗಳೂರು ಇಲ್ಲಿ ಏರ್ಪಡಿಸಲಾಗಿದೆ.   ಅರ್ಹ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಯೊಂದಿಗೆ ಖುದ್ದು ಹಾಜರಾಗಲು ಸೂಚಿಸಿದೆ. ಹೆಚ್ಚಿನ ವಿವರಗಳಿಗಾಗಿ https://igccd.karnataka.gov.in/ ವೆಬ್‍ಸೈಟ್ ನ್ನು ನೋಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Post a Comment

0Comments

Post a Comment (0)