ರಾಜಾನುಕುಂಟೆ ಮಾರ್ಗವಾಗಿ ಎಂ.ವಿ.ಸೋಲಾರ್ (ದೇವನಹಳ್ಳಿ ರಸ್ತೆ)ವರೆಗಿನ 21.38 ಕಿಮೀ ರಸ್ತೆ ಚತುಷ್ಪಥ ರಸ್ತೆ ಅಭಿವೃಧ್ಧಿ ಕಾಮಗಾರಿ ಶೀಘ್ರದಲ್ಲಿ ಪೂರ್ಣ- ಸಚಿವ ಕೃಷ್ಣಬೈರೇಗೌಡ

varthajala
0

 ಬೆಂಗಳೂರು : ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಮಧುರೆಯಿಂದ ರರಾಜಾನುಕುಂಟೆ ಮಾರ್ಗವಾಗಿ ಎಂ.ವಿ.ಸೋಲಾರ್ (ದೇವನಹಳ್ಳಿ ರಸ್ತೆ)ವರೆಗಿನ 21.38 ಕಿಮೀ ಉದ್ದದ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಅಭಿವೃಧ್ಧಿಪಡಿಸುವ ಕಾಮಗಾರಿ ಪ್ರಗತಿಯಲ್ಲಿದ್ದು ಸದರಿ ರಸ್ತೆಯ ಮರುಪಂಕ್ತೀಕರಣ ಕುರಿತು ಯಾವುದೇ ಪ್ರಸ್ತಾವನೆ ಇರುವುದಿಲ್ಲ ಎಂದು ತಿಳಿಸಿದರು. 

ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಯಲಹಂಕ ಕ್ಷೇತ್ರದ ಶಾಸಕ ವಿಶ್ವನಾಥ ಎಸ್.ಆರ್. ಇವರ ಪ್ರಶ್ನಗೆ ಉಪಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು ಬೆಂಗಳೂರು ಮಹಾನಗರ ಪ್ರದೇಶದ ವ್ಯಾಪ್ತಿಯಲ್ಲಿ ಬೆಂಗಳೂರು ನಗರದ ಸುತ್ತಲಿನ ಪ್ರದೇಶಗಳಾದ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ಆನೇಕಲ್, ಕನಕಪುರ, ರಾಮನಗರ, ಚನ್ನಪಟ್ಟಣ, ಮಾಘಡಿ, ನೆಲಮಂಗಲ ಪಟ್ಟಣ/ನಗರಗಳ ಸಮಗ್ರ ಬೆಳವಣಿಗೆಗೆ ಪೂರಕವಾಗಿ ಮತ್ತು ಭವಿಷ್ಯದಲ್ಲಿ ವಾಹನ ದಟ್ಟಣೆಯಾಘದಂತೆ ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ 2007ರಲ್ಲಿ ಮದ್ಯಂತರ ವರ್ತುಲ ರಸ್ತೆಯನ್ನು ನಿರ್ಮಿಸಲು ಅಧಿಸೂಚನೆ ಹೊರಡಿಸಲಾಗಿರುತ್ತದೆ. ಈ ರಸ್ತೆ ಪಂಕ್ತಿಕರಣಕ್ಕೆ ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಿಸಿ ಮರುನಿಗದಿಗೊಳಿಸಿ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ ಪರಿಷ್ಕøತ ಅಧಿಸೂಚನೆಯನ್ನು ದಿನಾಂಕ: 16-03-2023ರಂದು ಹೊರಡಿಸಲಾಗಿರುತ್ತದೆ ಎಂದರು. 
ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಯೋಜನಾ ದೃಷ್ಟಿಯಿಂದ ಮಧ್ಯಂತರ ವರ್ತುಲ ರಸ್ತೆಯನ್ನು ನಿರ್ಮಿಸುವುದು ಸೂಕ್ತವಾಗಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದು ಕಾಮಗಾರಿಯ ಪ್ರಗತಿ ಬಗ್ಗೆ ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಸದನದಲ್ಲಿ ವಿವರಿಸಿದರು.

Post a Comment

0Comments

Post a Comment (0)