ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2026 ನೇ ಜನವರಿ 09 ರಿಂದ 11 ರವರೆಗೆ ಬೆಂಗಳೂರಿನ ರಾಜಾಜಿನಗರದ 4 ನೇ ಬ್ಲಾಕ್ 53 ನೇ ಕ್ರಾಸ್‍ನಲ್ಲಿರುವ ಶ್ರೀರಾಮಮಂದಿರ ಕ್ರೀಡಾಂಗಣದಲ್ಲಿ ಮೂರು ದಿನಗಳ ಕರ್ಮಣಿ ಉತ್ಸವ -2026 ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜನವರಿ 9 ರಂದು ಸಂಜೆ 6.30 ಗಂಟೆಗೆ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿರುವರು. ಮಾನ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವರಾದ ರಾಮಲಿಂಗಾರೆಡ್ಡಿ ಅವರ ಘನ ಉಪಸ್ಥಿತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್.ಹೆಬ್ಬಾಳಕರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆ.ಎಂ.ರೇವಣ್ಣ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರಾದ ಪಿ.ಸಿ.ಮೋಹನ್, ರಾಜ್ಯಸಭೆ ಸದಸ್ಯರಾದ ಜೆ.ಸಿ.ಚಂದ್ರಶೇಖರ್, ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಸುರೇಶ್ ಕುಮಾರ್, ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಿಯಾಕೃಷ್ಣ, ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಅವರು ಉಪಸ್ಥಿತರಿರುವರು.
ಜನವರಿ 9 ರಿಂದ 11 ರಾಜ್ಯದ ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳು ಉತ್ಪಾದಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ
January 08, 2026
0
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಜಿ. ಪದ್ಮಾವತಿ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಾರ್ಯದರ್ಶಿಗಳಾದ ಡಾ.ಶಮ್ಲಾ ಇಕ್ಬಾಲ್, ನಿರ್ದೇಶಕರಾದ ಮಹೇಶ್ ಬಾಬು ಎನ್. ಅವರು ಉಪಸ್ಥಿತರಿರಲಿದ್ದಾರೆ.
ಈ ಕರ್ಮಣಿ ಉತ್ಸವ – 2026 ರ ಕಾರ್ಯಕ್ರಮದಲ್ಲಿ ರಾಜ್ಯದ ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು ಉತ್ಪಾದಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳಿಗೆ ಉತ್ತೇಜನ ಹಾಗೂ ಪ್ರೋತ್ಸಾಹವನ್ನು ನೀಡಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡುವಂತೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.