ಬೆಂಗಳೂರು : ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ವತಿಯಿಂದ 2025ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಮತ್ತು 2024ನೇ ಸಾಲಿನ ಪುಸ್ತಕ ಬಹುಮಾನ ಪ್ರದಾನ ಸಮಾರಂಭವನ್ನು ಜನವರಿ 09 ರಂದು ಬೆಳಿಗ್ಗೆ ಬೆಂಗಳೂರಿನ ಕಲಾಗ್ರಾಮದ ಸುವರ್ಣ ಸಾಂಸ್ಕøತಿಕ ಸಮುಚ್ಚಯದಲ್ಲಿ ಹಮ್ಮಿಕೊಳ್ಳಲಾಗಿದೆ. 2025ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿಗೆ ಜೆ.ವಿ.ಕಾರ್ಲೊ, ಪ್ರೊ.ಮನಮಾಲ ವಿಶ್ವನಾಥ್, ಡಾ.ಕೆ.ಆರ್.ಸಂಧ್ಯಾರೆಡ್ಡಿ, ಡಾ.ವಿಠ್ಠಲರಾವ್ ಬಿ.ಗಾಯಕ್ವಾಡ ಹಾಗು ಡಾ.ಜೆ.ಪಿ.ದೊಡಮನಿ ಇವರುಗಳು ಆಯ್ಕೆಯಾಗಿದ್ದಾರೆ. ಡಾ.ನಟರಾಜ್ ಹೊನ್ನವಳ್ಳಿ, ಡಾ.ಸದಾನಂದ ಆರ್, ಕಾರ್ತಿಕ್ ಆರ್, ಡಾ.ಮಲ್ಲೇಶಪ್ಪ ಸಿದ್ರಾಂಪೂರಾ ಹಾಗೂ ಡಾ.ದೇವರಾಜ್ ಎಸ್. ಇವರುಗಳು 2024ನೆಯ ಸಾಲಿನ ಸಾಲಿನ ಪುಸ್ತಕ ಬಹುಮಾನ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಹಾಗು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಸಮಾರಂಭದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಲೋಕಸಭಾ ಸದಸ್ಯರಾದ ಡಾ.ಸಿ.ಎನ್.ಮಂಜುನಾಥ್ ಅವರು ಸಮಾರಂಭದಲ್ಲಿ ಘನÀ ಉಪಸ್ಥಿತಿ ವಹಿಸಲಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕರಾದ ಮುನಿರತ್ನ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಖ್ಯಾತ ಸಾಹಿತಿಗಳಾದ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ 2025ರ ಗೌರವ ಪ್ರಶಸ್ತಿ ಪುರಸ್ಕøತರು ಮತ್ತು 2024ನೆಯ ಸಾಲಿನ ಪುಸ್ತಕ ಬಹುಮಾನ ಪುರಸ್ಕøತರ ಪರಿಚಯದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಿದ್ದಾರೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಮಂಜುನಾಥ್ ಜೆ. ಹಾಗೂ ನಿರ್ದೇಶಕರಾದ ಶ್ರೀಮತಿ ಕೆ.ಎಂ.ಗಾಯಿತ್ರಿ ಅವರು ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜನವರಿ 9 ರಂದು 2025ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಮತ್ತು 2024ನೇ ಸಾಲಿನ ಪುಸ್ತಕ ಬಹುಮಾನ ಪ್ರದಾನ ಸಮಾರಂಭ
January 05, 2026
0
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ ಶ್ರೀಮತಿ ಕೆ.ಎಂ.ಗಾಯಿತ್ರಿ ಅವರು ಗಣ್ಯರ ಸ್ವಾಗತ ಕಾರ್ಯವನ್ನು ಮಾಡಲಿದ್ದು, ಕುವೆಂಪು ಭಾμÁ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಚೆನ್ನಪ್ಪ ಕಟ್ಟಿ ಅವರು ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಕುವೆಂಪು ಭಾμÁ ಭಾರತಿ ಪ್ರಾಧಿಕಾರದ ರಿಜಿಸ್ಟ್ರಾರ್ ದತ್ತಪ್ಪ ಸಾಗನೂರ ಅವರು, ಪ್ರಾಧಿಕಾರದ ಸದಸ್ಯರಾದ ಪ್ರೊ.ಎಂ.ಎಸ್.ಶೇಖರ್, ಪ್ರೊ. ಬಿ.ಎಲ್.ರಾಜು, ಪ್ರೊ.ನಾರಾಯಣಘಟ್ಟ, ಪ್ರೊ.ಹಾಕಿರಾ ಖಾನಂ, ಡಾ.ಕರಿಯಪ್ಪ ಮಾಳಗಿ, ಡಾ.ಭಾರತೀದೇವಿ.ಪಿ, ಎಸ್.ಗಂಗಾಧರಯ್ಯ ಡಾ.ಡಿ.ಕೆ.ಚಿತ್ತಯ್ಯ ಪೂಜಾರ್ ಹಾಗೂ ಡಾ.ಜಾಜೀ ದೇವೇಂದ್ರಪ್ಪ ಅವರು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.