ಬೆಂಗಳೂರು : ಸರ್ಕಾರಿ ಆಸ್ಪತ್ರೆಗಳಲ್ಲಿ ಆದ್ಯತೆ ಮೇರೆಗೆ ವೈದ್ಯರುಗಳು ಹಾಗೂ ಇತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಸಕಲೇಶಪುರ ವಿಧಾನಸಭಾ ಕ್ಷೇತ್ರದ ಸದಸ್ಯ ಸಿಮೆಂಟ್ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಕಲೇಶಪುರದಲ್ಲಿ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡುವ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಹಾಸನ ಇವರಿಂದ ಪ್ರಸ್ತಾವನೆ ಸ್ವೀಕರಿಸಲಾಗಿದೆ. ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಪ್ರತ್ಯೇಕ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಪ್ರಾರಂಭಿಸಲು ಶೇಕಡ 70 ಕ್ಕಿಂತ ಹೆಚ್ಚು ಹಾಸಿಗೆಗಳು ಹೆರಿಗೆ ಪ್ರಕರಣಗಳಿಂದ ಭರ್ತಿಯಾಗಿರಬೇಕು. ಇದನ್ನು ಮುಂದಿನ ದಿನಗಳಲ್ಲಿ ಪರಿಶೀಲಿಸಲಾಗುವುದು ಎಂದರು.Post a Comment
0Comments