ಬೆಂಗಳೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಪಟ್ಟಣದ ಸುವರ್ಣ ಕನ್ನಡ ಭವನದ ಮುಂದುವರೆದ ಕಾಮಗಾರಿಗೆ ಅನುಮೋದಿತ ಮೊತ್ತಕ್ಕಿಂತ ಹೆಚ್ಚುವರಿಯಾಗಿ ರೂ.80.00ಲಕ್ಷಗಳನ್ನು ಒದಗಿಸುವಂತೆ ಕೋರಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವರು ತಿಳಿಸಿದರು.
ಇಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಕೊಳ್ಳೇಗಾಲ ಶಾಸಕ ಕೃಷ್ಣಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕೊಳ್ಳೇಗಾಲದ ಸುವರ್ಣ ಕರ್ನಾಟಕ ಭವನ ಕಾಮಗಾರಿಯನ್ನು ಪೂರ್ಣಗೊಳಿಸಲ ಪರಿಸ್ಕøತ ಅಂದಾಜು ಪಟ್ಟಿಯಂತೆ ರೂ. 186.49 ಲಕ್ಷಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಈಗಾಗಲೇ ಸದರಿ ಕಾಮಗಾರಿಗೆ ಬಿಡುಗಡೆಯಾಗಿರುವ ರೂ. 125.00ಲಕ್ಷಗಳನ್ನು ಹೊರತುಪಡಿಸಿ ಬಾಕಿಯಿರುವ ಅನುದಾನ ರೂ. 61.49 ಲಕ್ಷಗಳಲ್ಲಿ ರೂ.50.00 ಲಕ್ಷಗಳನ್ನು ಬಿಡುಗಡೆ ಮಾಡಲಾಗಿದೆ. ಹೆಚ್ಚುವರಿಯಾಗಿ ರೂ. 80.00 ಲಕ್ಷಗಳ ಹೆಚ್ಚುವರಿ ಅನುದಾನ ಒದಗಿಸುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.