ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಖಾಲಿ ಇದ್ದ 28 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಲಿಖಿತ ಪರೀಕ್ಷೆ ನಡೆಸಿ ಅತ್ಯಂತ ಪಾರದರ್ಶಕವಾಗಿ ನೇರ ನೇಮಕಾತಿ ಪ್ರಕ್ರಿಯೆಯಡಿ,
ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೇ ನಿಯಮಾನುಸಾರ ಖಾಲಿ ಹುದ್ದೆಗಳಿಗೆ ನೇಮಕಗೊಂಡಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಾತಿ ಆದೇಶದ ಪತ್ರವನ್ನು ವಿತರಿಸಿದರು.