ಮೈಸೂರು ಜಿಲ್ಲೆಯ ಯಾವುದೇ ಪುರಸಭೆಗಳಲ್ಲಿ ಟೆಂಡರ್ ಕರೆಯುವುದು ಬಾಕಿ ಇರುವುದಿಲ್ಲ - ಪೌರಾಡಳಿತ ಸಚಿವ ರಹೀಂ ಖಾನ್

varthajala
0

 ಬೆಂಗಳೂರು  : ಮೈಸೂರು ಜಿಲ್ಲೆಯ ಯಾವುದೇ ಪುರಸಭೆಗಳಲ್ಲಿ ಟೆಂಡರ್ ಕರೆಯುವುದು ಬಾಕಿ ಇರುವುದಿಲ್ಲ ಹಾಗೂ ಟೆಂಡರ್ ಪ್ರಕ್ರಿಯೆಗಳಲ್ಲಿ ಯಾವುದೇ ವಿಳಂಬವಾಗಿರುವುದಿಲ್ಲ ಎಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ತಿಳಿಸಿದರು. 

ಇಂದು ವಿಧಾನ ಪರಿಷತ್ತಿನ ಅಧಿವೇಶನದ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೈಸೂರು ಜಿಲ್ಲೆಯ 13 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ ಹಂತ 4 ರಡಿ ಅನುದಾನ ಬಿಡುಗಡೆ ಮಾಡಲಾಗಿದೆ ಹಾಗೂ ಕಾಮಗಾರಿಗಳನ್ನು ಸಹ ಕೈಗೊಳ್ಳಲಾಗಿದೆ. ಬಾಕಿ ಇರುವ ಕಾಮಗಾರಿಗಳನ್ನು ನಿಗಧಿಪಡಿಸಲಾದ ಕಾಲಾವಧಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

Post a Comment

0Comments

Post a Comment (0)