ಬೆಂಗಳೂರು: ತುಮಕೂರಿನ ಸಿದ್ದಗಂಗಾ ಮಠದ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣಾ ಕಾರ್ಯಕ್ರಮಹಾಗೂ ಬೆಂಗಳೂರಿನ ಸಿ.ಎಂ.ಆರ್. ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಆಗಮಿಸಿದ್ದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಆತ್ಮೀಯವಾಗಿ ಬೀಳ್ಕೊಟ್ಟರು.
ಈ ಸಮಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಕರ್ನಾಟಕ ಪೆÇಲೀಸ್ ಮಹಾ ನಿರ್ದೇಶಕರಾದ ಎಂ.ಎ. ಸಲೀಂ, ಬೆಂಗಳೂರು ನಗರ ಪೆÇಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.