ಬೆಂಗಳೂರು : ನೇತಾಜಿ ಸುಭಾಷ್ ಚಂದ್ರ ಬೋಸ್‍ರವರ ಜನ್ಮದಿನ ಅಂಗವಾಗಿ ವಿಧಾನಸೌಧದ ಈಶಾನ್ಯ ದಿಕ್ಕಿನಲ್ಲಿ ಮರು
ಸ್ಥಾಪನೆಯಾದ ನೇತಾಜಿ ಸುಭಾಷ್ ಚಂದ್ರ ಬೋಸ್‍ರವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗೊಳಿಸಿ, ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.